News Karnataka Kannada
Sunday, April 28 2024
ದೆಹಲಿ

ಗುರುಗ್ರಾಮ್’ನಲ್ಲಿ ಮಹಡಿ ಮೇಲ್ಛಾವಣಿ ಕುಸಿತ: ಇಬ್ಬರು ಸಾವು

Breaking News
Photo Credit :

ನವದೆಹಲಿ: ಗುರುಗ್ರಾಮದಲ್ಲಿ ವಸತಿ ಕಟ್ಟಡದ ಸೆಕ್ಟರ್ 109ರಲ್ಲಿ ಚಿಂಟೆಲ್ಸ್ ಪ್ಯಾರಾಡೈಸೊದಲ್ಲಿ ಆರನೇ ಮಹಡಿಯಲ್ಲಿ ನಿರ್ಮಾಣ  ಮೇಲ್ಛಾವಣಿಯ ಒಂದು ಭಾಗವು ಕುಸಿದು ಇಬ್ಬರು ಮೃತಪಟ್ಟಿದ್ದು, ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಳಿಕ ಸ್ಥಳಕ್ಕೆ ಧಾವಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ಹಹಣಾ ಪಡೆ (ಎಸ್‌ಡಿಆರ್‌ಎಫ್), ನಾಗರಿಕ ರಕ್ಷಣಾ ತಂಡಗಳು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆಗೆ ನೇತೃತ್ವ ವಹಿಸಿದವು.

ಅವಶೇಷಗಳಡಿ ಸಿಲುಕಿದರನ್ನು ರಕ್ಷಿಸಲಾಗಿದ್ದು, ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು. ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಜಾರಿಯಲ್ಲಿದೆ.

ಚಿಂಟೆಲ್ಸ್ ಪ್ಯಾರಾಡೈಸೊದಲ್ಲಿ ಒಟ್ಟು 530 ಪ್ಲ್ಯಾಟ್‌ಗಳಿದ್ದು, 400ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ.

ಆರನೇ ಮಹಡಿಯಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಕಟ್ಟಡದ ಮೂರರಿಂದ ಆರನೇ ಮಹಡಿ ವರೆಗೆ ಖಾಲಿಯಿದ್ದು, ಮೊದಲ ಹಾಗೂ ಎರಡನೇ ಮಹಡಿಯಲ್ಲಿ ಜನರು ವಾಸಿಸುತ್ತಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ನಾನು ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಪ್ರತಿಯೊಬ್ಬರ ಸುರಕ್ಷತೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಟ್ವೀಟಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು