Categories: ದೆಹಲಿ

ಗೋಧಿ ರಫ್ತಿನ ಮೇಲೆ ನಿರ್ಬಂಧ ಸಡಿಲಿಸಿದ ಕೇಂದ್ರ

ನವದೆಹಲಿ : ಉತ್ಪಾದನೆ ಇಳಿಕೆಯಾದ ಹಿನ್ನೆಲೆಯಲ್ಲಿ ಭಾರತವು ಗೋಧಿ ರಫ್ತಿಗೆ ನಿಷೇಧ ಹೇರಿತ್ತು. ಆದರೆ ನಿಷೇಧ ಹೇರುವುದಕ್ಕೂ ಮುನ್ನವೇ ಕಸ್ಟಮ್ಸ್ ಪ್ರಾಧಿಕಾರದಲ್ಲಿ ನೋಂದಾಯಿಸಲಾದ ನಿಗದಿತ ಪ್ರಮಾಣದ ಗೋಧಿಯನ್ನು ರಫ್ತು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಮೇ 13ಕ್ಕೂ ಮುನ್ನವೇ ಕಸ್ಟಮ್ಸ್ ವ್ಯವಸ್ಥೆಗಳಲ್ಲಿ ನೋಂದಾಯಿಸಲಾಗಿದ್ದು, ಅಂತಹ ಸರಕುಗಳನ್ನು ರಫ್ತು ಮಾಡಲು ಕೇಂದ್ರ ಸರ್ಕಾರ ಅನುಮತಿಸಿದೆ ಎಂದು ವಾಣಿಜ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಜೊತೆಗೆ ಗೋಧಿ ರಫ್ತು ಮಾಡಲು ತೊಡಗಿರುವ ಮೇರಾ ಇಂಟರ್‌ನ್ಯಾಶನಲ್ ಇಂಡಿಯಾ ಪ್ರೈ.ಲಿ. ಈಜಪ್ಟ್‌ 61,500 ಮೆಟ್ರಿಕ್ ಟನ್ ಲೋಡ್ ಗೋಧಿ ರಫ್ತಿಗೆ ಅನುಮತಿ ನೀಡಿದೆ. ಅದರಲ್ಲಿ 44,340 ಮೆಟ್ರಿಕ್ ಟನ್ ಈಗಾಗಲೇ ಲೋಡ್ ಮಾಡಲಾಗಿದೆ. ಇನ್ನು 17,160 ಮೆಟ್ರಿಕ್ ಟನ್ ಮಾತ್ರ ಬಾಕಿ ಉಳಿದಿದೆ. ಕೇಂದ್ರ ಸರ್ಕಾರ ಪೂರ್ಣ ಪ್ರಮಾಣದ ಗೋಧಿಯನ್ನು ಸರಬರಾಜು ಮಾಡಲು ನಿರ್ಧರಿಸಿದೆ ಎಂದು ಹೇಳಿದೆ.

ರಫ್ತಿಗೆ ನಿಷೇಧ ಹೇರಿದ್ದು ಏಕೆ ?: ಭಾರತದಲ್ಲಿ ಉಷ್ಣತೆಯಲ್ಲಿ ಏರಿಕೆ ಕಂಡಿದ್ದರಿಂದ ಗೋಧಿ ಉತ್ಪಾದನೆಗೆ ಹೊಡೆತ ಬಿದ್ದಿತ್ತು. ಇದರ ಜೊತೆಗೆ ಕಡಿಮೆ ಉತ್ಪಾದನೆ ಮತ್ತು ಜಾಗತಿಕ ಬೆಲೆಗಳು ತೀವ್ರವಾಗಿ ಹೆಚ್ಚಿರುವುದು ಸೇರಿದಂತೆ ತನ್ನದೇ ಆದ 1.4 ಶತಕೋಟಿ ಜನರ ಆಹಾರ ಭದ್ರತೆಯ ಬಗ್ಗೆ ಭಾರತ ಚಿಂತಿಸಿತ್ತು. ಇದರಿಂದಾಗಿ ರಫ್ತು ವ್ಯಾಪಾರಕ್ಕೆ ನಿಷೇಧದ ನಿರ್ಧಾರವನ್ನು ತೆಗೆದುಕೊಂಡಿತ್ತು.

ಭಾರತದ ಈ ನಿರ್ಧಾರವನ್ನು US, ಕೆನಡಾ, EU ಮತ್ತು ಆಸ್ಟ್ರೇಲಿಯಾ ಸೇರಿದಂತೆ ಅನೇಕ ಪಾಶ್ಚಿಮಾತ್ಯ ರಾಷ್ಟ್ರಗಳು ತರಾಟೆಗೆ ತೆಗೆದುಕೊಂಡಿದೆ. ಆದರೆ ಭಾರತದಲ್ಲಿ ಗೋಧಿಯ ರಫ್ತು ನಿಷೇಧ ಮಾಡಿರುವುದಕ್ಕೆ ಚೀನಾ ಬೆಂಬಲ ನೀಡಿದೆ. ಅಭಿವೃದ್ಧಿಶೀಲ ರಾಷ್ಟ್ರಗಳನ್ನು ದೂಷಿಸುವುದು ಸರಿಯಲ್ಲ. G7 ರಾಷ್ಟ್ರಗಳು ತಮ್ಮ ರಫ್ತುಗಳನ್ನು ಹೆಚ್ಚಿಸುವ ಮೂಲಕ ಆಹಾರ ಮಾರುಕಟ್ಟೆ ಪೂರೈಕೆಯನ್ನು ಸ್ಥಿರಗೊಳಿಸಲು ಏಕೆ ಮುಂದಾಗುವುದಿಲ್ಲ ಎಂದು ಚೀನಾ ಪ್ರಶ್ನಿಸಿದೆ.

Ashika S

Recent Posts

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

18 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

29 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

39 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

50 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

1 hour ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

1 hour ago