Categories: ದೆಹಲಿ

ಗ್ರಾಹಕರಿಗೆ ಕೊಂಚ ನಿರಾಳ: ಪೆಟ್ರೋಲ್, ಡೀಸೆಲ್ ದರ ಇಳಿಕೆ

ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಂಕ ಪರಿಷ್ಕರಣೆ ಮಾಡಿದ ನಂತರ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಿವೆ. ಇಂಧನ ದರ ಬದಲಾಗದೇ ಉಳಿದಿದ್ದು, ಸ್ಥಳೀಯ ತೆರಿಗೆಗಳ ಆಧರಿಸಿ ಚಿಲ್ಲರೆ ದರದಲ್ಲಿ ಬದಲಾವಣೆ ಆಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ನಿರಂತರ ಇಳಿಕೆಯಾದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕಡಿಮೆ ಮಾಡಲಾಗುವುದು. ಬ್ರೆಂಟ್ ಕಚ್ಚಾ ತೈಲ ದರ ಶುಕ್ರವಾರ ಪ್ರತಿ ಬ್ಯಾರಲ್ ಗೆ 4 ಡಾಲರ್ ನಷ್ಟು ಹೇಳಿಕೆಯಾಗಿದೆ. ಆದರೆ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ತಗ್ಗಿಸಿಲ್ಲ.

ಹಿಂದಿನ 15 ದಿನಗಳ ಜಾಗತಿಕ ಇಂಧನದ ಸರಾಸರಿಯನ್ನು ಆಧರಿಸಿ ರಿಟೇಲ್ ಮಾರಾಟ ದರವನ್ನು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಪರಿಷ್ಕರಿಸುತ್ತವೆ. ಈ ಕಾರಣದಿಂದಾಗಿ ಸದ್ಯಕ್ಕೆ ದರದಲ್ಲಿ ಬದಲಾವಣೆ ಆಗಿಲ್ಲ. ಆದರೆ, ನಿರಂತರವಾಗಿ ಕಚ್ಚಾತೈಲದ ಬೆಲೆ ಕಡಿಮೆಯಾದಲ್ಲಿ ದೇಶೀಯವಾಗಿಯೂ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Swathi MG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago