ನವದೆಹಲಿ : ಚಳಿಗಾಲದ ಅಧಿವೇಶನ ನಡೆಯುತ್ತಿರುವ ವೇಳೆ ಸಂಸತ್ತಿನ ಕೊಠಡಿ ಸಂಖ್ಯೆ 59ರಲ್ಲಿ ಬುಧವಾರ ಬೆಳಗ್ಗೆ ಲಘು ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ಬೆಳಿಗ್ಗೆ 8.05 ಕ್ಕೆ ಸಂಸತ್ ಭವನದ ಪ್ರೆಸ್ ರೂಮ್ ಎದುರಿನ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ. ಕೊಠಡಿಯಲ್ಲಿನ ಕಂಪ್ಯೂಟರ್ ಸೆಟ್, ಕುರ್ಚಿ ಮತ್ತು ಟೇಬಲ್ ನಲ್ಲಿ ಬೆಂಕಿ ತಾಗಿದ ಬೆಂಕಿಯನ್ನು ನಂದಿಸಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೆಂಕಿಯನ್ನು ನಿಯಂತ್ರಣಕ್ಕೆ ತಂದು ಅಗ್ನಿಶಾಮಕ ಸಿಬ್ಬಂದಿಗಳು ಬೆಳಿಗ್ಗೆ 8:50 ಕ್ಕೆ ಹಿಂತಿರುಗಿದರು ಎಂದು ಹಿರಿಯ ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ.