Categories: ದೆಹಲಿ

ಚೀನಾದಲ್ಲಿ ವಿಮಾನ ಪತನಕ್ಕೆ ದುಃಖ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಚೀನಾದಲ್ಲಿ ಸೋಮವಾರ ವಿಮಾನ ಪತನಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಘಾತ ಹಾಗೂ ದುಃಖ ವ್ಯಕ್ತಪಡಿಸಿದ್ದಾರೆ.

132 ಮಂದಿಯಿದ್ದ ಚೀನಾದ ಪ್ರಯಾಣಿಕ ವಿಮಾನ ದಕ್ಷಿಣ ಚೀನಾದ ಪರ್ವತ ಪ್ರದೇಶದಲ್ಲಿ ಪತನಗೊಂಡಿತ್ತು. ವಿಮಾನದಲ್ಲಿದ್ದವರು ಯಾರೂ ಬದುಕುಳಿದಿರುವ ಸಾಧ್ಯತೆ ಇಲ್ಲ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿವೆ.

ಚೀನಾ ಈಸ್ಟರ್ನ್‌ ಏರ್‌ಲೈನ್ಸ್‌ನ ಬೋಯಿಂಗ್‌ 737-800 ವಿಮಾನವು ಕುನ್‌ಮಿಂಗ್‌ನಿಂದ ಗುವಾಂಗ್‌ಝೌಗೆ ಸಂಚರಿಸುತ್ತಿತ್ತು. ವುಝೌ ನಗರದ ಸಮೀಪ ವಿಮಾನ ಪತನಗೊಂಡಿದೆ. ವಿಮಾನ ಬಿದ್ದ ಸ್ಥಳದಲ್ಲಿ ಭಾರಿ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿದೆ. ವಿಮಾನ ಪತನ ಹಿಂದಿನ ಕಾರಣ ತಕ್ಷಣಕ್ಕೆ ತಿಳಿದು ಬಂದಿಲ್ಲ.

Gayathri SG

Recent Posts

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

16 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

35 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

36 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

51 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

54 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

1 hour ago