News Karnataka Kannada
Wednesday, May 01 2024
ದೆಹಲಿ

ಚುನಾವಣಾ ರಾಜ್ಯಗಳಲ್ಲಿ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲು ಚುನಾವಣಾ ಆಯೋಗ ಸೂಚನೆ

Vaccination
Photo Credit :

ನವದೆಹಲಿ(ಜ.04) : ಉತ್ತರ ಪ್ರದೇಶ, ಪಂಜಾಬ್‌ ಸೇರಿದಂತೆ ಪಂಚರಾಜ್ಯಗಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಚುನಾವಣಾ ರಾಜ್ಯಗಳಲ್ಲಿ ಕೋವಿಡ್‌ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗ, ಈ ಎಲ್ಲಾ ರಾಜ್ಯಗಳಲ್ಲಿ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲು ಸೂಚಿಸಿದೆ.

ಅಲ್ಲದೆ ಚುನಾವಣಾ ಕಾರ್ಯಗಳಿಗೆ ನಿಯೋಜಿತರಾಗುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎರಡೂ ಡೋಸ್‌ ಲಸಿಕೆ ನೀಡಿರಬೇಕು ಎಂದು ತಿಳಿಸಿದೆ.

ಇದೇ ತಿಂಗಳ 2ನೇ ವಾರದಲ್ಲಿ ಉತ್ತರ ಪ್ರದೇಶ, ಪಂಜಾಬ್‌, ಗೋವಾ, ಮಣಿಪುರ ಮತ್ತು ಉತ್ತರಾಖಂಡ್‌ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕವನ್ನು ಆಯೋಗ ಘೋಷಣೆ ಮಾಡುವ ಸಾಧ್ಯತೆಯಿದೆ. ಹೀಗಾಗಿ ಇತ್ತೀಚೆಗೆ ಈ ಎಲ್ಲಾ ರಾಜ್ಯಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಆಯೋಗ, ಚುನಾವಣೆ ಸಿಬ್ಬಂದಿಯನ್ನು ಕೊರೋನಾ ನಿಯಂತ್ರಣದ ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿ, ಅಗತ್ಯವಿರುವವರಿಗೆ ಬೂಸ್ಟರ್‌ ಡೋಸ್‌ ನೀಡಬೇಕು ಎಂದು ಸೂಚನೆ ನೀಡಿತ್ತು.

ಉತ್ತರ ಪ್ರದೇಶದ ವಿಧಾನಸಭೆ ಅವಧಿಯು ಮೇ ತಿಂಗಳಲ್ಲಿ ಅಂತ್ಯವಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು