ದೆಹಲಿ

ಜಪಾನ್‌ ಪ್ರವಾಸ ಮುಗಿಸಿ ದೆಹಲಿಗೆ ವಾಪಸ್ ಆದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಮೇ 25: ಜಪಾನ್‌ನ ಟೋಕಿಯೋದಲ್ಲಿ ನಡೆದ ಕ್ವಾಡ್ ನಾಯಕರ ಶೃಂಗಸಭೆ 2022 ಮುಗಿಸಿ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ ವಾಪಸ್ ಆಗಿದ್ದಾರೆ. ಕ್ವಾಡ್ ಶೃಂಗಸಭೆಯಲ್ಲಿ ಪಾಳ್ಗೊಳ್ಳಲು ಮೋದಿ ಜಪಾನ್ ಪ್ರವಾಸ ಕೈಗೊಂಡಿದ್ದರು.

ಬುಧವಾರ ಮುಂಜಾನೆ ದೆಹಲಿಗೆ ನರೇಂದ್ರ ಮೋದಿ ಆಗಮಿಸಿದರು. ಮಂಗಳವಾರ ಟೋಕಿಯೋದಲ್ಲಿ ಕ್ವಾಡ್ ನಾಯಕರ ಶೃಂಗಸಭೆ ನಡೆಯಿತು. ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು.

ಸೋಮವಾರ ಟೋಕಿಯೋಕ್ಕೆ ತೆರಳಿದ್ದ ಪ್ರಧಾನಿ ಮೋದಿಗೆ ಭಾರತೀಯರು ಅದ್ದೂರಿ ಸ್ವಾಗತ ಕೋರಿದ್ದರು. ಅಂದು ಸಂಜೆ ಅವರು ಟೋಕಿಯೋದಲ್ಲಿರುವ ಅನಿವಾಸಿ ಭಾರತೀಯರ ಜೊತೆ ಸಂವಾದ ನಡೆಸಿದ್ದರು, ಅವರನ್ನು ಉದ್ದೇಶಿಸಿ ಮಾತನಾಡಿದ್ದರು.

ಆಸ್ಟ್ರೇಲಿಯಾ ಪ್ರಧಾನಿಗೆ ಆಹ್ವಾನ; ಟೋಕಿಯೋದಲ್ಲಿ ಕ್ವಾಡ್ ಶೃಂಗ ಸಭೆ ಪೂರ್ಣಗೊಂಡ ಬಳಿಕ ನರೇಂದ್ರ ಮೋದಿ ಆಸ್ಟ್ರೇಲಿಯಾ ಪ್ರಧಾನ ಮಂತ್ರಿ ಅಂಥೋನಿ ಅಲ್ಬನೀಸ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಮೇ 21ರಂದು ನಡೆದ ಚುನಾವಣೆಯಲ್ಲಿ ಜಯಗಳಿಸಿದುದಕ್ಕಾಗಿ ಅವರನ್ನು ಅಭಿನಂದಿಸಿದರು.

ದ್ವಿಪಕ್ಷೀಯ ಮಾತುಕತೆ ವೇಳೆ ಉಭಯ ನಾಯಕರು ಹೂಡಿಕೆ, ರಕ್ಷಣಾ ಉತ್ಪಾದನೆ, ನವೀಕೃತ ಇಂಧನ, ಶಿಕ್ಷಣ, ವಿಜ್ಞಾನ, ಮತ್ತು ತಂತ್ರಜ್ಞಾನ, ಕೃಷಿ ಸಂಶೋಧನೆ ವಿಚಾರಗಳ ಕುರಿತು ಚರ್ಚೆ ನಡೆಸಿದರು. ಪ್ರಧಾನಿ ಮೋದಿ ಅಂಥೋನಿ ಅಲ್ಬನೀಸ್‌ರನ್ನು ಭಾರತಕ್ಕೆ ಆಹ್ವಾನಿಸಿದರು.

ಕ್ವಾಡ್ ಶೃಂಗಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, “ಅತ್ಯಲ್ಪ ಸಮಯದಲ್ಲಿ, ವಿಶ್ವ ವೇದಿಕೆಯಲ್ಲಿ ಕ್ವಾಡ್ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ. ಇಂದು ಕ್ವಾಡ್ ನ ವ್ಯಾಪ್ತಿಯು ವಿಸ್ತಾರವಾಗಿದೆ ಮತ್ತು ಸ್ವರೂಪವು ಪರಿಣಾಮಕಾರಿಯಾಗಿದೆ. ನಮ್ಮ ಪರಸ್ಪರರ ನಂಬಿಕೆ, ನಮ್ಮ ಸಂಕಲ್ಪ ಪ್ರಜಾಪ್ರಭುತ್ವ ಅಂಗಗಳಿಗೆ ಹೊಸ ಶಕ್ತಿ ಮತ್ತು ಉತ್ಸಾಹವನ್ನು ನೀಡುತ್ತಿದೆ” ಎಂದು ಹೇಳಿದ್ದರು.

“ಕ್ವಾಡ್ ಮಟ್ಟದಲ್ಲಿ ನಮ್ಮ ಪರಸ್ಪರ ಸಹಕಾರವು ಉಚಿತ, ಮುಕ್ತ ಮತ್ತು ಅಂತರ್ಗತ ಇಂಡೋ-ಪೆಸಿಫಿಕ್ ಪ್ರದೇಶಕ್ಕೆ ಉತ್ತೇಜನ ನೀಡುತ್ತಿದೆ, ಇದು ನಮ್ಮೆಲ್ಲರ ಸಾಮಾನ್ಯ ಉದ್ದೇಶವೂ ಆಗಿದೆ. ಕೋವಿಡ್-19 ನಂತಹ ಪ್ರತಿಕೂಲ ಪರಿಸ್ಥಿತಿಗಳ ನಡುವೆಯೂ, ಲಸಿಕೆ-ವಿತರಣೆ, ಆರ್ಥಿಕ ಸಹಕಾರದಂತಹ ಹಲವು ಕ್ಷೇತ್ರಗಳಲ್ಲಿ ನಾವು ಸಮನ್ವಯವನ್ನು ಹೆಚ್ಚಿಸಿದ್ದೇವೆ. ಇದು ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸಮೃದ್ಧಿ ಮತ್ತು ಸ್ಥಿರತೆಯನ್ನು ಖಾತ್ರಿಪಡಿಸುತ್ತಿದೆ” ಎಂದು ತಿಳಿಸಿದ್ದರು.

Gayathri SG

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

21 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

46 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago