Categories: ದೆಹಲಿ

ಜಾಗತಿಕವಾಗಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ರಾಷ್ಟ್ರ ಸಿದ್ಧ: ಪ್ರಧಾನಿ ಮೋದಿ

ನವದೆಹಲಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ, ಬಹುಪಕ್ಷೀಯ ವೇದಿಕೆಗಳು ಸೇರಿದಂತೆ ಜಾಗತಿಕವಾಗಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ಭಾರತವು ತನ್ನ ಪಾಲುದಾರ ರಾಷ್ಟ್ರಗಳೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.ತಂತ್ರಜ್ಞಾನವು ಪ್ರಜಾಪ್ರಭುತ್ವವನ್ನು “ಸಕಾರಾತ್ಮಕವಾಗಿ ಅಥವಾ ಋಣಾತ್ಮಕವಾಗಿ” ಪ್ರಭಾವಿಸುವ ಸಾಮರ್ಥ್ಯವನ್ನು ಹೊಂದಿರುವುದರಿಂದ ತಂತ್ರಜ್ಞಾನ ಸಂಸ್ಥೆಗಳು ಪ್ರಜಾಪ್ರಭುತ್ವ ಸಮಾಜಗಳನ್ನು ಸಂರಕ್ಷಿಸಲು ಕೊಡುಗೆ ನೀಡಬೇಕು ಎಂದು ಗುರುವಾರ ನಡೆದ ವರ್ಚುವಲ್ ಶೃಂಗಸಭೆಯಲ್ಲಿ ಮೋದಿ ಹೇಳಿದ್ದರು

ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಆಯೋಜಿಸಿದ್ದ ಪ್ರಜಾಪ್ರಭುತ್ವ ಶೃಂಗಸಭೆಯಲ್ಲಿ ಭಾಗವಹಿಸಿದ ಒಂದು ದಿನದ ನಂತರ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

“ಅಧ್ಯಕ್ಷ ಬೈಡೆನ್ ಅವರ ಆಹ್ವಾನದ ಮೇರೆಗೆ ಪ್ರಜಾಪ್ರಭುತ್ವದ ಶೃಂಗಸಭೆಯಲ್ಲಿ ಭಾಗವಹಿಸಿದ್ದಕ್ಕಾಗಿ ಸಂತೋಷವಾಗಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ, ಬಹುಪಕ್ಷೀಯ ವೇದಿಕೆಗಳು ಸೇರಿದಂತೆ ಜಾಗತಿಕವಾಗಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ನಮ್ಮ ಪಾಲುದಾರರೊಂದಿಗೆ ಕೆಲಸ ಮಾಡಲು ಭಾರತ ಸಿದ್ಧವಾಗಿದೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಬೈಡೆನ್ ಅವರು ಆಯೋಜಿಸಿದ್ದ ಪ್ರಜಾಪ್ರಭುತ್ವ ಶೃಂಗಸಭೆಯಲ್ಲಿ ನೂರಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.

Swathi MG

Recent Posts

ಸಿದ್ದಲಿಂಗ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು : ಓರ್ವ ಗಂಭೀರ

ಸಿದ್ದಲಿಂಗ ಮುತ್ಯಾನ ಜಾತ್ರೆಯಲ್ಲಿ ದುರಂತ ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಘಟನೆ ಇಂಡಿ ತಾಲೂಕಿನ…

28 mins ago

ಪ್ರಹ್ಲಾದ ಜೋಶಿ ನಿವಾಸಕ್ಕೆ ಇಂದು ಸಚಿವ ಅರ್ಜುನರಾಮ್ ಮೇಘವಾಲ್ ಭೇಟಿ

ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆಯ ರಾಜ್ಯ ಸಚಿವ ಅರ್ಜುನರಾಮ್ ಮೇಘವಾಲ್ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ…

56 mins ago

ಮದುವೆ ದಿಬ್ಬಣದಲ್ಲಿ ಭೀಕರ ಅಪಘಾತ : ಲಾರಿ ಪಲ್ಟಿಯಾಗಿ ಇಬ್ಬರು ಮಹಿಳೆಯರು ಬಲಿ

ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿರೋ ಘಟನೆ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದ ಬಳಿ ನಡೆದಿದೆ. ಭಾಗ್ಯಮ್ಮ…

1 hour ago

ಶತಕ ಸಿಡಿಸಿದ ವಿಲ್​ ಜಾಕ್ಸ್​ : ಆರ್​ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಗೆಲುವು

ವಿಲ್​ ಜ್ಯಾಕ್ಸ್ ​ಅವರ ಶತಕ ಬಾರಿಸಿದ್ದು ಅವರ ಭರ್ಜರಿ ಬ್ಯಾಟಿಂಗ್‌ಗೆ ಫ್ಯಾನ್ಸ್‌ ಫಿದ ಆಗಿದ್ದಾರೆ. ಇನ್ನು ವಿರಾಟ್​ ಕೊಹ್ಲಿಯ(70*) ಅರ್ಧಶತಕದ…

2 hours ago

ಅಶ್ಲೀಲ ವಿಡಿಯೋ ಪ್ರಕರಣ : ತಂದೆ ಹೆಚ್​​ಡಿ ರೇವಣ್ಣ ವಿರುದ್ಧವೂ ಸಂತ್ರಸ್ಥೆ ದೂರು

ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಬಾರಿ ಸದ್ದು ಮಾಡುತ್ತಿದ್ದು ಇವರ ಜೊತೆ ಅವರ ತಂದೆ…

2 hours ago

ಜಿಂಕೆ ಕೊಂದು ಎಳೆದೊಯ್ದ ಹುಲಿ : ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ದೃಶ್ಯ

ಬಂಡೀಪುರದಲ್ಲಿ ಸಪಾರಿಗೆ ತೆರಳಿದ್ದ ವಾಹನಗಳ ಸನಿಹದಲ್ಲೇ ಹುಲಿಯೊಂದು ಜಿಂಕೆಯನ್ನ ಭೇಟೆಯಾಡಿ ಎಳೆದೊಯ್ಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.

3 hours ago