News Karnataka Kannada
Monday, April 29 2024
ದೆಹಲಿ

ಜಿ.ಎಸ್.ಟಿ. ಪರಿಹಾರ ಅವಧಿ ವಿಸ್ತರಣೆಗೆ ಮುಖ್ಯಮಂತ್ರಿ ಮನವಿ

Bommai
Photo Credit :

ಹೊಸದಿಲ್ಲಿ: ರಾಜ್ಯಗಳಿಗೆ ಕೇಂದ್ರ ಸರಕಾರ ನೀಡುವ ಜಿಎಸ್ ಟಿ ಪರಿಹಾರವನ್ನು 2024-25ರ ವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮನವಿ ಮಾಡಿದರು.

ಎರಡು ದಿನಗಳ ಹೊಸದಿಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳು ಇಂದು ಹಣಕಾಸು ಸಚಿವರನ್ನು ಭೇಟಿಯಾಗಿ, 2022ರ ಮಾರ್ಚ್ ಗೆ ಜಿ.ಎಸ್.ಟಿ. ಪರಿಹಾರದ ಅವಧಿ ಮುಕ್ತಾಯಗೊಳ್ಳಲಿದೆ. ಆದರೆ ಕೋವಿಡ್-19ರಿಂದಾಗಿ ರಾಜ್ಯ ಸರಕಾರಗಳು ಸಂಪನ್ಮೂಲ ಕ್ರೋಢೀಕರಿಸಲು ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಜಿ.ಎಸ್.ಟಿ. ಪರಿಹಾರದ ಅವಧಿ ವಿಸ್ತರಿಸುವ ಮೂಲಕ ರಾಜ್ಯ ಸರಕಾರಗಳ ಸಂಕಷ್ಟ ಬಗೆಹರಿಸುವಂತೆ ಮನವಿ ಮಾಡಿದರು.

ಕಳೆದ ಎರಡು ವರ್ಷಗಳಲ್ಲಿ ಸಾಲದ ಮೂಲಕ ರಾಜ್ಯಗಳಿಗೆ ಜಿ.ಎಸ್.ಟಿ. ಪರಿಹಾರ ಒದಗಿಸಿದಂತೆ, ಮುಂದಿನ ಮೂರು ವರ್ಷಗಳೂ ಇದೇ ಕ್ರಮ ಅನುಸರಿಸುವಂತೆ ಹಾಗೂ ಜಿ.ಎಸ್.ಟಿ. ಸೆಸ್ ಸಂಗ್ರಹದಿಂದ ಈ ಸಾಲ ಮರುಪಾವತಿ ಮಾಡಬಹುದು ಎಂದು ಮುಖ್ಯಮಂತ್ರಿಗಳು ಪ್ರಸ್ತಾಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು