News Karnataka Kannada
Thursday, May 02 2024
ದೆಹಲಿ

ಟಿಎಂಸಿ ಬುಡಸಮೇತ ಕಿತ್ತೊಗೆಯುವವರೆಗೂ ವಿರಮಿಸುವ ಪ್ರಶ್ನೆಯೇ ಇಲ್ಲ: ಅಮಿತ್ ಶಾ

ಕ್ರಿಮಿನಲ್ ಕೇಸ್ ಗೆ ಸಂಬಂಧಪಟ್ಟಂತೆ ಕೇಂದ್ರ ಬಿಜೆಪಿ ಸರ್ಕಾರ ತಂದಿರುವ ಮೂರು ಹೊಸ ಕಾನೂನುಗಳು ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ಇದೀಗ ಸರ್ಕಾರ ಹೇಳಿದೆ.
Photo Credit :

ನವದೆಹಲಿ : ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವನ್ನು ಅಧಿಕಾರದಿಂದ ಬುಡಸಮೇತ ಕಿತ್ತೊಗೆಯುವವರೆಗೂ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಹೇಳಿದ್ದಾರೆ.

ಸಿಲಿಗುರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿನ ಭ್ರಷ್ಟಾಚಾರ, ರಾಜಕೀಯ ಗಲಭೆಗಳ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ. ಬಂಗಾಳದಲ್ಲಿ ಟಿಎಂಸಿ, ನಾಗರಿಕ ತಿದ್ದುಪಡಿ ಕಾಯ್ದೆಯ ಕುರಿತು ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲವನ್ನು ಮೂರರಿಂದ 77ಕ್ಕೆ ಏರಿಕೆ ಮಾಡಿರುವುದಕ್ಕೆ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಟಿಎಂಸಿಯ ಆಡಳಿತವನ್ನು ಕೊನೆಗಾಣಿಸುವುದು ಬಿಜೆಪಿಯ ಗುರಿಯಾಗಿದೆ ಎಂದು ಶಾ ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು