ದೆಹಲಿ

ಡಿಜಿಟಲಿಕರಣದತ್ತ ಮುನ್ನಡೆಯುತ್ತಿದೆ ಭಾರತದ ಕೃಷಿ: ಪ್ರಧಾನಿ ಮೋದಿ

ಕೇಂದ್ರ ಬಜೆಟ್​​ನಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ಕೃಷಿಯಲ್ಲಿನ ಡಿಜಿಟಲಿಕರಣದತ್ತ ಭಾರತ ಮುನ್ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಹೈದರಾಬಾದ್‌ನ ICRISAT ಕ್ಯಾಂಪಸ್​​​ನ ಅಂತಾರಾಷ್ಟ್ರೀಯ ಬೆಳೆಗಳ ಸಂಶೋಧನಾ ಸಂಸ್ಥೆಯ 50ನೇ ವಾರ್ಷಿಕೋತ್ಸವ ಆಚರಣೆಯಲ್ಲಿ ಮಾತನಾಡಿದ ಅವರು, ಕೃಷಿಯನ್ನು ಸುಲಭ ಮತ್ತು ಸುಸ್ಥಿರಗೊಳಿಸಲು ಇತರ ರಾಷ್ಟ್ರಗಳಿಗೆ ಸಹಾಯ ಮಾಡುವ ಐದು ದಶಕಗಳ ಅನುಭವವನ್ನು ICRISAT ಹೊಂದಿದೆ.

50 ವರ್ಷಗಳ ಕಾಲ ವಿವಿಧ ಬೆಳೆಗಳ ಬಗೆಗಿನ ನಿಮ್ಮ ಸಂಶೋಧನೆಗೆ ಅಭಿನಂದನೆಗಳು. ಐದು ದಶಕಗಳ ಅವಧಿಯಲ್ಲಿ ಭಾರತ ಕೃಷಿಯಲ್ಲಿ ಸಮೃದ್ಧಿ ಸಾಧಿಸಿದ್ದು, ಮುಂದಿನ 50 ವರ್ಷಗಳಲ್ಲಿ ಹೆಚ್ಚಿನ ಸಂಶೋಧನೆ ಹೊರಬರಲಿ ಎಂದು ನಾನು ಬಯಸುತ್ತೇನೆ ಎಂದರು.

ಇದೇ ವೇಳೆ ICRISAT ನ 50 ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು.

ಕೇಂದ್ರ ಬಜೆಟ್​​ನಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದೇವೆ. ಕೃಷಿಯಲ್ಲಿ ಹೆಚ್ಚಿನ ತಂತ್ರಜ್ಞಾನ ಬಳಕೆ ಮಾಡಲು ಮುಂದಾಗಿದ್ದು, ಇದೀಗ ಡಿಜಿಟಲ್​ ಕೃಷಿಯತ್ತ ಗುರಿ ಹೊಂದಿದ್ದೇವೆ. ಕೃಷಿಯಲ್ಲಿ ಡ್ರೋನ್ ಬಳಕೆಗೆ ಹಣ ಮಂಜೂರು ಮಾಡಲಾಗಿದ್ದು, ಸಾಗುವಳಿ ಭೂಮಿ ಡಿಜಿಟಲೀಕರಣಗೊಳ್ಳುತ್ತಿದೆ ಎಂದರು

ಭಾರತದಲ್ಲಿ ಶೇಕಡಾ 80 ರಷ್ಟು ರೈತರು ಸಣ್ಣ ರೈತರು ಮತ್ತು ಅವರು ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಹವಾಮಾನ ಬದಲಾವಣೆಗಳು ಅವರ ಮೇಲೆ ನಕಾರಾತ್ಮಕ ಪ್ರಭಾವವನ್ನು ತೋರಿಸುತ್ತಿವೆ. ಅವರ ಕೃಷಿ ವೆಚ್ಚವನ್ನು ಕಡಿಮೆ ಮಾಡಬೇಕು. ವಿಜ್ಞಾನಿಗಳು ತಮ್ಮ ಕೃಷಿಯನ್ನು ಬಲಪಡಿಸಲು ಹೆಚ್ಚು ಶ್ರಮಿಸಬೇಕಾಗಿದೆ ಎಂದರು.

ದೇಶದ 170 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣಗೊಂಡಿದೆ. ಇಂತಹ ಕೃಷಿ ಕ್ಷೇತ್ರಗಳಲ್ಲಿ ಇದೀಗ ಆಧುನಿಕ ವಿಧಾನ ಪರಿಚಯ ಮಾಡಲಾಗುತ್ತದೆ . ಡಿಜಿಟಲ್​ ಕೃಷಿಯಿಂದ ಸಾಕಷ್ಟು ಬದಲಾವಣೆಗಳಾಗಿವೆ. ರೈತರು ಸಾವಯವ ಕೃಷಿಯತ್ತ ಗಮನ ಹರಿಸಬೇಕು. ಭಾರತದಲ್ಲಿ ತಾಳೆ ಎಣ್ಣೆ ಉತ್ಪಾದನೆ ಅಭಿವೃದ್ಧಿಯಾಗಬೇಕಿದೆ. ಪಾಮ್​ ಆಯಿಲ್​ ಕೃಷಿಯಿಂದ ತೆಲಂಗಾಣ ಹೆಚ್ಚಿನ ಲಾಭ ಗಳಿಸಿದೆ ಎಂದರು.

Sneha Gowda

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

19 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

37 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

54 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago