News Karnataka Kannada
Saturday, May 11 2024
ದೆಹಲಿ

ಡಿಜಿಟಲ್ ಆರೋಗ್ಯ ಮಿಷನ್ ಲೋಕಾರ್ಪಣೆ : ಪ್ರಧಾನಿ ಮೋದಿ

Modi
Photo Credit :

ಇಂದು ಪ್ರಧಾನಿ ಮೋದಿ ಡಿಜಿಟಲ್ ಆರೋಗ್ಯ ಮಿಷನ್ ಲೋಕಾರ್ಪಣೆ ಮಾಡಿದ್ದಾರೆ. ಈ ಯೋಜನೆ ಅಡಿಯಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಗೂ ಆರೋಗ್ಯ ಗುರುತಿನ ಚೀಟಿ ನೀಡಲಾಗುವುದು. ಇದರಲ್ಲಿ ಪ್ರತಿಯೊಬ್ಬರ ಅರೋಗ್ಯದ ದಾಖಲೆಗಳು, ವೈದ್ಯರ ಹಾಗೂ ಆರೋಗ್ಯ ಸೇವೆಗಳ ಮಾಹಿತಿಯನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿರುತ್ತದೆ.

ಈ ಯೋಜನೆ ಕುರಿತು ಪ್ರಧಾನಿ ಮೋದಿ 2020ರ ಸ್ವಾತಂತ್ರೋತ್ಸವದ ದಿನದಂದು ಕೆಂಪುಕೋಟೆಯಲ್ಲಿ ಮಾಡಿದ ಭಾಷಣದಲ್ಲಿ ಉಲ್ಲೇಖಿಸಿದ್ದರು. ಸದ್ಯ ಇಂದು ಈ ಯೋಜನೆ ಆರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ ಜಾರಿಯಾಗಲಿದೆ.

ಈ ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಆರೋಗ್ಯ ಐಡಿಯನ್ನು ನೀಡಲಾಗುತ್ತದೆ. ಇದರಿಂದ ಯಾವುದೇ ವ್ಯಕ್ತಿಯ ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ತಕ್ಷಣ ಪಡೆಯಬಹುದಾಗಿದೆ.

ಇದರ ಮೂಲಕ ಆಸ್ಪತ್ರೆಗೆ ದಾಖಲಾಗುವುದರಿಂದ ಡಿಸ್ಚಾರ್ಜ್ ಆಗುವವರೆಗಿನ ಸಂಪೂರ್ಣ ಮಾಹಿತಿ ದಾಖಲಿಸಬಹುದಾಗಿದೆ. ಈ ಡಿಜಿಟಲ್ ಹೆಲ್ತ್ ಕಾರ್ಡ್ ಮೂಲಕ ಸುಲಭವಾಗಿ ವ್ಯಕ್ತಿಯ ಆರೋಗ್ಯದ ವಿವರಗಳನ್ನು ಪಡೆಯಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು