ಹೊಸದಿಲ್ಲಿ: ಅಂತಾರಾಷ್ಟ್ರೀಯ ಹಣಕಾಸು ಸೇವೆಗಳ ಕೇಂದ್ರ ಪ್ರಾಧಿಕಾರ (ಐಎಫ್ ಎಸ್ ಸಿಎ) ಭಾರತ ಸರಕಾರದ ಸಹಭಾಗಿತ್ವದಲ್ಲಿ ಗಿಫ್ಟ್ ಸಿಟಿ ಮತ್ತು ಬ್ಲೂಮ್ ಬರ್ಗ್ ಸಹಯೋಗದಲ್ಲಿ ಡಿಸೆಂಬರ್ 3 ಮತ್ತು 4ರಂದು ಹಣಕಾಸು ತಂತ್ರಜ್ಞಾನ – ಫಿನ್ ಟೆಕ್ ಕುರಿತ ಚಿಂತನಾ ನಾಯಕತ್ವ ವೇದಿಕೆ – ಫಿನ್ ಟೆಕ್ ಫೋರಂ ಅನ್ನು ಆಯೋಜಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿ. 3ರಂದು ಬೆಳಗ್ಗೆ 10 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.