News Karnataka Kannada
Thursday, May 09 2024
ದೆಹಲಿ

ಡಿ.ಕೆ. ಶಿವಕುಮಾರ್‌ಗೆ ವಿದೇಶಕ್ಕೆ ಪ್ರಯಾಣಿಸಲು ಅನುಮತಿ ನೀಡಿದ ದೆಹಲಿ ಹೈಕೋರ್ಟ್

5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಕೊಡುತ್ತೇವೆ, ರದ್ದು ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
Photo Credit :

ನವದೆಹಲಿ : ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ತೆರಳಲು ದೆಹಲಿ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.

ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿಗಳಾದ ಆಶಾ ಮೆನನ್, ‘ಅರ್ಜಿದಾರರಿಗೆ ಮಾ. 31 ರಿಂದ ಏ. 6 ರ ನಡುವೆ ದುಬೈ ಮತ್ತು ಅಬುಧಾಬಿಗೆ ಪ್ರಯಾಣಿಸಲು ಅವಕಾಶವಿದೆ. ಅಲ್ಲಿಂದ ಹಿಂದಿರುಗಿದ ವಿಚಾರವನ್ನು ತನಿಖಾಧಿಕಾರಿಗೆ ತಿಳಿಸುತ್ತಾರೆ’ ಎಂದು ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್ ಅವರನ್ನು ಪ್ರತಿನಿಧಿಸಿದ್ದ ವಕೀಲ ಮಯಾಂಕ್ ಜೈನ್, ದುಬೈನಲ್ಲಿ ವಿಶೇಷ ಅತಿಥಿಯಾಗಿರುವ ಕಾರ್ಯಕ್ರಮಕ್ಕೆ ಶಿವಕುಮಾರ್ ಅವರ ಉಪಸ್ಥಿತಿಯ ಅಗತ್ಯವಿದೆ ಎಂದು ಹೇಳಿದ್ದರು.

2019ರ ಅಕ್ಟೋಬರ್‌ನಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಶಿವಕುಮಾರ್‌ಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್‌, ನ್ಯಾಯಾಲಯದ ಅನುಮತಿಯಿಲ್ಲದೆ ದೇಶ ತೊರೆಯುವಂತಿಲ್ಲ ಎಂಬ ಷರತ್ತು ವಿಧಿಸಿತ್ತು.

ಕರ್ನಾಟಕದಲ್ಲಿ 7 ಬಾರಿ ಶಾಸಕರಾಗಿರುವ ಶಿವಕುಮಾರ್, ದೆಹಲಿಯ ಕರ್ನಾಟಕ ಭವನದಲ್ಲಿ ಉದ್ಯೋಗಿಯಾಗಿರುವ ಹನುಮಂತಯ್ಯ ಮತ್ತು ಇತರರ ಮೇಲೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ತೆರಿಗೆ ವಂಚನೆ ಮತ್ತು ಕೋಟಿ ರೂಪಾಯಿ ಮೌಲ್ಯದ ‘ಹವಾಲಾ’ ವಹಿವಾಟಿನ ಆರೋಪದ ಮೇಲೆ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಸಲ್ಲಿಸಿದ್ದ ಚಾರ್ಜ್ ಶೀಟ್ ಆಧರಿಸಿ ಪ್ರಕರಣ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು