ದೆಹಲಿ

ಡಿ.ಕೆ. ಶಿವಕುಮಾರ್ ವಿರುದ್ಧ ಇ ಡಿ ಚಾರ್ಜ್ ಶೀಟ್ ಸಲ್ಲಿಕೆ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ವಿರುದ್ಧ ಹೊಸದಾಗಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

2019ರಲ್ಲಿ ದೆಹಲಿಯ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎರಡುವರೆ ವರ್ಷಗಳ ಬಳಿಕ ಇಡಿ ಅಧಿಕಾರಿಗಳು ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ದೆಹಲಿಯ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.

ಒಂದು ವೇಳೆ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪ ಸಾಬೀತಾದಲ್ಲಿ ಜೈಲುಶಿಕ್ಷೆ ಪ್ರಕಟವಾಗುವ ಸಾಧ್ಯತೆ ಇದ್ದು, 2023 ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಸಿಎಂ ಸ್ಥಾನದ ಆಕಾಂಕ್ಷಿಯಾಗಿರುವ ಡಿಕೆಶಿ ಕನಸಿಗೆ ಮುಳುವಾಗುವ ಸಾಧ್ಯತೆ ದಟ್ಟವಾಗಿದೆ.

Ashika S

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

12 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

37 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago