ನವದೆಹಲಿ: ದೆಹಲಿಯ ಶಾಸ್ತ್ರಿ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಗಡಿ ರಕ್ಷಣಾ ಪಡೆಯ ಇಬ್ಬರು ಯೋಧರು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ದೆಹಲಿಯ ಶಾಸ್ತ್ರಿ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಬಳಿ ಈ ದುರ್ಘಟನೆ ಸಂಭವಿಸಿದ್ದು, ಬಿಎಸ್ ಎಫ್ ಯೋಧರನ್ನು ಹೊತ್ತು ಸಾಗುತ್ತಿದ್ದ ಆಯಂಬುಲೆನ್ಸ್ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಆಯಂಬುಲೆನ್ಸ್ ಮುಗುಚಿಕೊಂಡಿದೆ.
ಈ ವೇಳೆ ಅದರೊಳಗಿದ್ದವರ ಪೈಕಿ ಇಬ್ಬರು ಬಿಎಸ್ ಎಫ್ ಯೋಧರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಅಪಘಾತ ಸಂಭವಿಸಿದ ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.