ದೆಹಲಿ

ದೆಹಲಿಗೆ ನವೆಂಬರ್‌ 27 ರಿಂದ ಪೆಟ್ರೋಲ್‌, ಡೀಸೆಲ್‌ ವಾಹನ ಪ್ರವೇಶ ನಿರ್ಬಂಧ

ದೆಹಲಿ : ಮಿತಿಮೀರಿದ ವಾಯುಮಾಲಿನ್ಯದಿಂದ ರಾಷ್ಟ್ರ ರಾಜಧಾನಿ ದೆಹಲಿ ನಿವಾಸಿಗರು ವಿಷಗಾಳಿ ಸೇವಿಸಿ ಬದುಕುವಂತಾಗಿದೆ. ವಾಯು ಗುಣಮಟ್ಟ ಸೂಚ್ಯಂಕವು ದೇಶದಲ್ಲೇ ಅತ್ಯಂತ ಗರಿಷ್ಠ ತಲುಪಿದ್ದು, ”ಅಪಾಯಕಾರಿ” ಮಟ್ಟದಲ್ಲೇ ಮುಂದುವರಿಯುತ್ತಿದೆ. ಪ್ರತಿ ವರ್ಷ ಚಳಿಗಾಲದಲ್ಲಿ ದೆಹಲಿಯ ಸಮಸ್ಯೆ ಇದಾಗುತ್ತಿದೆ.
ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ತ್ವರಿತ ಕ್ರಮಕ್ಕಾಗಿ ಈಗಾಗಲೇ ಸುಪ್ರೀಂಕೋರ್ಟ್‌ ಚಾಟಿ ಬೀಸಿದೆ. ಅದರ ಪರಿಣಾಮವಾಗಿ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷದ ಆಡಳಿತವು ಹಲವು ಸುಧಾರಣಾ ಕ್ರಮಗಳನ್ನು ಜಾರಿಗೆ ತರುತ್ತಿದೆ. ಅದರಂತೆ, ನವೆಂಬರ್‌ 27 ರಿಂದ ದೆಹಲಿಗೆ ಪೆಟ್ರೋಲ್‌, ಡೀಸೆಲ್‌ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಡಿಸೆಂಬರ್‌ 3ನೇ ತಾರೀಖಿನವರೆಗೂ ಈ ನಿರ್ಬಂಧ ಜಾರಿಯಲ್ಲಿ ಇರಲಿದೆ. ದೆಹಲಿಯನ್ನು ಪ್ರವೇಶಿಸಲು ಕೇವಲ ಸಿಎನ್‌ಜಿ ಮತ್ತು ಎಲೆಕ್ಟ್ರಿಕ್‌ ವಾಹನಗಳಿಗೆ ಮಾತ್ರವೇ ಅನುಮತಿ ನೀಡಲಾಗಿದೆ. ಈ ವೇಳೆ ವಾಯು ಗುಣಮಟ್ಟ ಸುಧಾರಣೆಯನ್ನು ಗಮನಿಸಿ, ನಿರ್ಬಂಧದ ಅವಧಿಯನ್ನು ವಿಸ್ತರಿಸುವ ಚಿಂತನೆ ದೆಹಲಿ ಸರಕಾರದ್ದಾಗಿದೆ.

ಇನ್ನು ಸರಕಾರಿ ನೌಕರರು ತಮ್ಮ ಕ್ವಾಟರ್ಸ್‌ಗಳಿಂದ ಕಚೇರಿಗೆ ತೆರಳಲು ಕೂಡ ಅನುಕೂಲವಾಗುವಂತೆ ದೆಹಲಿ ಸರಕಾರವೇ ಸಿಎನ್‌ಜಿ ಬಳಕೆಯ ಖಾಸಗಿ ವಾಹನಗಳನ್ನು ಬಾಡಿಗೆಗೆ ಪಡೆದು ರಸ್ತೆಗಿಳಿಸಿದೆ. ಗುಲಾಬಿ ಬಾಗ್‌ ಮತ್ತು ನಿಮ್ರಿ ಕಾಲನಿಯಲ್ಲಿ ಈ ವಾಹನಗಳು ಸಂಚರಿಸಲಿವೆ ಎಂದು ದೆಹಲಿ ಸರಕಾರದ ಪರಿಸರ ಸಚಿವ ಗೋಪಾಲ್‌ ರಾಯ್‌ ಅವರು ಹೇಳಿದ್ದಾರೆ.

ಇನ್ನು ಸಚಿವಾಲಯದಿಂದ ಸಮೀಪದ ಮೆಟ್ರೋ ಕೇಂದ್ರಗಳಿಗೆ ನಿರಂತರವಾಗಿ ಸಂಚರಿಸುವ ಸಿಎನ್‌ಜಿ ಬಳಕೆಯ ಶಟಲ್‌ ಬಸ್‌ಗಳನ್ನು ಹತ್ತು ನಿಮಿಷಕ್ಕೆ ಒಂದರಂತೆ ಸಂಚಾರ ಮಾಡಿಸಲಾಗುವುದು. ಸಾರ್ವಜನಿಕ ಸಾರಿಗೆಯನ್ನು ಎಲ್ಲ ಸರಕಾರಿ ನೌಕರರು ಕಡ್ಡಾಯವಾಗಿ ಬಳಸುವಂತೆ ಸೂಚನೆ ನೀಡಲಾಗಿದೆ. ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಇನ್ನೂ ಹೆಚ್ಚಿನ ನಿರ್ಬಂಧಗಳನ್ನು ಜಾರಿಗೆ ತರಲಾಗುವುದು ಎಂದು ರಾಯ್‌ ತಿಳಿಸಿದ್ದಾರೆ.

ನವೆಂಬರ್‌ 13ರಂದು ಸುಪ್ರೀಂಕೋರ್ಟ್‌ ಚಾಟಿ ಬೀಸಿದ ಪರಿಣಾಮ ದೆಹಲಿ ಸರಕಾರವು ಕೂಡಲೇ ಶಿಕ್ಷಣ ಸಂಸ್ಥೆಗಳನ್ನು ತಾತ್ಕಾಲಿಕವಾಗಿ ಮುಚ್ಚುವ ಆದೇಶ ಹೊರಡಿಸಿತ್ತು. ಮಕ್ಕಳು ಮನೆಯಿಂದಲೇ ಆನ್‌ಲೈನ್‌ ವಿದ್ಯಾಭ್ಯಾಸ ನಡೆಸಿ, ವಿಷಗಾಳಿ ಸೇವನೆಯಿಂದ ಪಾರಾಗಲಿ ಎಂದು ಸೂಚಿಸಿತ್ತು. ಜತೆಗೆ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಹಾಗೂ ಕಟ್ಟಡ ಕೆಡವುದನ್ನು ಕೂಡ ನಿರ್ಬಂಧಿಸಿತ್ತು. ಇದೇ ಸೋಮವಾರ ಕಟ್ಟಡ ಕಾಮಗಾರಿಗಳಿಗೆ ಅವಕಾಶ ನೀಡಲಾಗಿದೆ.

Gayathri SG

Recent Posts

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

5 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

20 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

40 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

1 hour ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

2 hours ago