ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಹೊಸದಾಗಿ 10 ಜನರಿಗೆ ಓಮಿಕ್ರಾನ್ ವೈರಸ್ ಸೋಂಕು ತಗುಲಿರೋದು ದೃಢಪಟ್ಟಿದೆ. ಇದರಿಂದಾಗಿ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾದಂತೆ ಆಗಿದೆ.
ಈ ಕುರಿತಂತೆ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ಮಾಹಿತಿ ನೀಡಿದ್ದು, ಹೊಸದಾಗಿ ಇಂದು ಮತ್ತೆ 10 ಜನರಿಗೆ ಓಮಿಕ್ರಾನ್ ರೂಪಾಂತರಿ ವೈರಸ್ ಸೋಂಕು ತಗುಲಿರೋದು ಪರೀಕ್ಷೆಯ ವರದಿಯಿಂದ ತಿಳಿದು ಬಂದಿದೆ. ಹೀಗಾಗಿ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದ್ದಾರೆ.
ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿರುವಂತ ಅನೇಕ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಡುತ್ತಿದ್ದಾರೆ. ಒಮಿಕ್ರಾನ್ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆಯನ್ನು ಹೆಚ್ಚು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.