ನವದೆಹಲಿ : ಅನಾರೋಗ್ಯದಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ತಿಂಗಳ ಆರಂಭದಲ್ಲಿ ದೆಹಲಿಯ ಏಮ್ಸ್ ಗೆ ದಾಖಲಾಗಿದ್ದ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಆಗಿದ್ದಾರೆ. ಅಂದಹಾಗೇ ಮಾಜಿ ಪ್ರಧಾನಿ ಮನಮೋಹ್ ಸಿಂಗ್ ಅವರಿಗೆ ಈ ಮೊದಲು ಕೊರೋನಾ ಸೋಂಕು ತಗುಲಿತ್ತು. ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿ, ಗುಣಮುಖರಾಗಿದ್ದರು. ಆ ನಂತ್ರ ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ, ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂತಹ ಅವರು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.