ನವದೆಹಲಿ : ದೆಹಲಿಯ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ ದುರಂತದಲ್ಲಿ 6 ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ದೆಹಲಿಯ ಆನಂದ್ ಪರ್ವತ್ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಅಗ್ನಿ ಅವಘಡದಲ್ಲಿ 6 ಜನರು ಗಾಯಗೊಂಡಿದ್ದು, ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ಗಾಯಗೊಂಡ 6 ಜನರನ್ನು ಬಿಎಲ್ ಕಪೂರ್ ಆಸ್ಪತ್ರೆಗೆ ದಾಖಲಿಸಲಾಗಿದೆ.