News Karnataka Kannada
Sunday, May 05 2024
ದೆಹಲಿ

ದೆಹಲಿಯ ಮಂಗೋಲ್‌ಪುರಿ ಪ್ರದೇಶದಲ್ಲಿ ಯುವಕನ ಶವ ತುಂಬಿಸಿದ್ದ ಬ್ಯಾಗ್‌ ಪತ್ತೆ!

Death
Photo Credit :

ನವದೆಹಲಿ:  ದೆಹಲಿಯ ಮಂಗೋಲ್‌ಪುರಿ ಪ್ರದೇಶದಲ್ಲಿ ಶುಕ್ರವಾರ 22 ವರ್ಷದ ಯುವಕನೊಬ್ಬನ ಶವವನ್ನು ತುಂಬಿಸಿದ್ದ ಪ್ರಯಾಣಿಕರ ಬ್ಯಾಗ್‌ವೊಂದು  ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಪೊಲೀಸರು ಸ್ಥಳಕ್ಕೆ ತೆರಳಿದ ಸಂದರ್ಭ ನೇರಳೆ (ಪರ್ಪಲ್) ಬಣ್ಣದ ಪ್ರಯಾಣಿಕ ಬ್ಯಾಗ್‌ ಸಿಕ್ಕಿದೆ. ಅದರಲ್ಲಿ ಸುಮಾರು 20-22 ವರ್ಷದ ಅಪರಿಚಿತ ವ್ಯಕ್ತಿಯ ಶವ, ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ’ ಎಂದು ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿಯು ಬಿಳಿ ಬಣ್ಣದ ಕುರ್ತಾ ಪೈಜಾಮ ಧರಿಸಿದ್ದಾಗಿಯೂ ಹೇಳಿದ್ದಾರೆ.

ಸದ್ಯ ಮೃತ ಯುವಕನ ಗುರುತು ಸಿಕ್ಕಿಲ್ಲ.ಈ ಕುರಿತು ಮಾತನಾಡಿರುವ ಡಿಸಿಪಿ ಶಮೀರ್ ಶರ್ಮಾ, ಪ್ರಕರಣ ಸಂಬಂಧ ಮಂಗೋಲ್‌ಪುರಿ ಪೊಲೀಸ್ ಠಾಣೆಗೆ ಬೆಳಗ್ಗೆ ಸುಮಾರು 7ಕ್ಕೆ ಕರೆ ಬಂದಿದೆ. ಅದರಂತೆ, ಮಂಗೋಲ್‌ಪುರಿ ವೈ ಬ್ಲಾಕ್‌ ಎದುರು ಇರುವ ಪೀರ್ ಬಾಬಾ ಮಜಾರ್ ಮುಖ್ಯರಸ್ತೆ ಸಮೀಪದಲ್ಲಿರುವ ಘಟನಾಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಐಪಿಸಿಯ ಸೆಕ್ಷನ್‌ 302ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

‘ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಗಾಗಿ ಹಲವು ತಂಡಗಳನ್ನು ರಚಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಸಮೀಪದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದೂ ಡಿಸಿಪಿ ತಿಳಿಸಿದ್ದಾರೆ.

ಅಕ್ಕಪಕ್ಕದ ಠಾಣೆಗಳಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಕಾಣೆಯಾದವರ ಬಗ್ಗೆ ದಾಖಲಾಗಿರುವ ಪ್ರಕರಣಗಳ ಪರಿಶೀಲನೆಗೆ ತಿಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು