News Karnataka Kannada
Thursday, May 02 2024
ದೆಹಲಿ

ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ!

Delhi
Photo Credit :

ದೆಹಲಿ:  ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನ ನಿಲ್ದಾಣದ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದರಿಂದ ಅನಾಹುತ ತಪ್ಪಿದೆ. ಶುಕ್ರವಾರ ಸಂಜೆ ನಡೆದಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.

ಶುಕ್ರವಾರ ಸಂಜೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಐದು ಗಂಟೆ ಮೂವತ್ತು ನಿಮಿಷದಲ್ಲಿ ಟೋಯಿಂಗ್ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಕೂಡಲೇ ಜಾಗೃತರಾದ ವಿಮಾನ ನಿಲ್ದಾಣದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ವಾಹನದಲ್ಲಿನ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟೋಯಿಂಗ್ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಾಗ ಪಕ್ಕದಲ್ಲಿ ದೊಡ್ಡ ವಿಮಾನವೂ ಇತ್ತು. ಪಕ್ಕದ ವಿಮಾನಕ್ಕೆ ಬೆಂಕಿ ವ್ಯಾಪಿಸಿದ್ದರೆ ಅಪಘಾತದ ತೀವ್ರತೆ ಹೆಚ್ಚಾಗುತ್ತಿದ್ದು, ಸಿಬ್ಬಂದಿ ಸಮಯೋಚಿತವಾಗಿ ಸ್ಪಂದಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.  ಘಟನೆಯ ಕುರಿತು ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು