ನವದೆಹಲಿ : ದೆಹಲಿ ಏಮ್ಸ್ ಆಸ್ಪತ್ರೆ ಬಳಿ ಪೊಲೀಸರು ಹಾಗೂ ದುಷ್ಕರ್ಮಿಗಳ ನಡುವೆ ಫೈರಿಂಗ್ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಏಮ್ಸ್ ಆಸ್ಪತ್ರೆಯ ಗೇಟ್ ನಂಬರ್ 2ರ ಬಳಿ ಪೊಲೀಸರು ಹಾಗೂ ದುಷ್ಕರ್ಮಿಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ದುಷ್ಕರ್ಮಿಗಳಾದ ಅಮಿತ್ ಹಾಗೂ ರಾಹುಲ್ ಕಾಲಿಗೆ ಗುಂಡು ಹಾರಿಸಿ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ಎರಡು ಪಿಸ್ತೂಲ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.