News Karnataka Kannada
Saturday, May 04 2024
ದೆಹಲಿ

ದೆಹಲಿ ವಾಯು ಮಾಲಿನ್ಯ ಸರ್ಕಾರಿ ನೌಕರರು ಮನೆಯಿಂದ ಕೆಲಸ ಮಾಡಲು ಕೇಂದ್ರ ಸರ್ಕಾರ ವಿರೋಧ

Kalkatta Air Pollution
Photo Credit :

ನವದೆಹಲಿ: ಸರ್ಕಾರಿ ನೌಕರರು ಮನೆಯಿಂದ ಕೆಲಸ ಮಾಡಲು ಅನುಮತಿ ನೀಡಲು ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ, ಇದರ ಬದಲಿಗೆ ಕಾರ್ಪೂಲಿಂಗ್ ಅನುಸರಿಸಲು ಸಿಬ್ಬಂದಿಗಳಿಗೆ ಸಲಹೆ ನೀಡಿದೆ ಎಂದು ತಿಳಿದುಬಂದಿದೆ.ದೆಹಲಿ ಹಾಗೂ ನೆರೆಹೊರೆಯ ನಗರಗಳಲ್ಲಿನ ವಾಯು ಮಾಲಿನ್ಯದ ಕುರಿತು ವಿಚಾರಣೆಗೆ ಮುಂಚಿತವಾಗಿ ಸುಪ್ರೀಂಕೋರ್ಟ್’ಗೆ ಕೇಂದ್ರ ಸರ್ಕಾರ ಅವಿಡವಿಟ್ ಸಲ್ಲಿಸಿದೆ.

ದೆಹಲಿ-ಎನ್’ಸಿಆರ್’ನ ವಾಯು ಮಾಲಿನ್ಯ ನಿರ್ವಹಣೆಯ ಆಯುಕ್ತರಿಗೆ ಅಗತ್ಯವಸ್ತುಗಳ ಸಾಗಿಸುವ ಲಾರಿಗಳ ಹೊರತುಪಡಿಸಿ, ಭಾರೀ ಗಾತ್ರದ ಟ್ರಕ್ ಗಳ, ಧರ್ಮಲ್ ಪ್ಲಾಂಟ್, ನಿರ್ಮಾಣ ಕಾರ್ಯಗಳನ್ನು ನವೆಂಬರ್ 21ರವರೆಗೂ ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ.

ಈ ನಡುವೆ ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ತನ್ನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸಲಹೆಗಳನ್ನು ನೀಡಿದ್ದು, ಸಂಚಾರಕ್ಕೆ ವಾಹನಗಳನ್ನು ಕಡಿಮೆ ಬಳಕೆ ಮಾಡುವಂತೆ ಹಾಗೂ ಇತರೆ ಸಿಬ್ಬಂದಿಗಳೊಂದಿಗೆ ಹಂಚಿಕೊಳ್ಳುವಂತೆ ಸಲಹೆ ನೀಡಿದೆ. ಇದರಿಂದ ಕೇಂದ್ರ ಸರ್ಕಾರದ ವಾಹನಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಲಿದೆ.

ಅಫಿಡವಿಟ್ ನಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಹಲವಾರು ಸರ್ಕಾರಿ ಕಾರ್ಯಗಳ ಮೇಲೆ ಗಣನೀಯವಾಗಿ ದೀರ್ಘಾವಧಿಯವರೆಗೆ ಪರಿಣಾಮ ಬೀರಿವೆ. ಇದು ಇಡೀ ದೇಶದ ಮೇಲೆ ಪರಿಣಾಮ ಉಂಟು ಮಾಡಿತು. ಸರ್ಕಾರಿ ನೌಕರರು ಮನೆಯಿಂದ ಕೆಲಸ ಮಾಡುವುದರಿಂದ ಯಾವುದೇ ಪ್ರಯೋಜನ ಹಾಗೂ ಪರಿಣಾಮಕಾರಿಯಾಗುವುದಿಲ್ಲ. ನೌಕರರಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡುವ ಬದಲು, ಅವರು ಪ್ರಯಾಣಕ್ಕೆ ಬಳಲುವ ವಾಹನಗಳ ಸಂಖ್ಯೆ ಮಾಡಿ, ಕಾರ್ಪೂಲಿಂಗ್ ಅನುಸರಿಸುವುದು ಉತ್ತಮವಾಗಿರುತ್ತದೆ ಎಂದು ಹೇಳಿದೆ.

ಈ ಹಿಂದೆ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಪಂಜಾಬ್, ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶಗಳೊಂದಿಗೆ ನವೆಂಬರ್ 16 ರಂದು “ತುರ್ತು ಸಭೆ” ನಡೆಸುವಂತೆ ಹಾಗೂ ಈ ವೇಳೆ ದೆಹಲಿ-ಎನ್‌ಸಿಆರ್‌ನಲ್ಲಿನ ವಾಯುಮಾಲಿನ್ಯವನ್ನು ತಡೆಯಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವಂತೆ ಸೂಚಿಸಿತ್ತು. ಅಲ್ಲದೆ, ಉದ್ಯೋಗಿಗಳಿಗೆ ಕನಿಷ್ಠ ಒಂದು ವಾರದವರೆಗೆ ಮನೆಯಿಂದ ಕೆಲಸ ಮಾಡಲು ಪರಿಗಣಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು