News Karnataka Kannada
Friday, May 03 2024
ದೆಹಲಿ

ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಮನೆ ಹಾನಿ ಪ್ರಕರಣ: 8 ಆರೋಪಿಗಳ ಬಂಧನ

ಎಎಪಿ ರಾಜ್ಯದ ಎಲ್ಲಾ 13 ಮತ್ತು ಚಂಡೀಗಢದ 1 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಶನಿವಾರ ಘೋಷಿಸಿದ್ದಾರೆ.
Photo Credit :

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಮನೆಯನ್ನು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 8 ಮಂದಿ ಆರೋಪಿಗಳನ್ನು ಇಂದು (ಮಾ.31) ಬಂಧಿಸಿದ್ದಾರೆ.

ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ಕೈಗೊಂಡಿದ್ದು, ಕಾರ್ಯಾಚರಣೆಯಲ್ಲಿ ಆರು ಪೊಲೀಸ್​ ತಂಡಗಳು ನಿರತವಾಗಿವೆ. ಕೆಲ ದುಷ್ಕರ್ಮಿಗಳು ನಿನ್ನೆ (ಮಾ.30) ಸಿಎಂ ಕೇಜ್ರಿವಾಲ್​ ಮನೆ ಸುತ್ತ ಮುತ್ತಲಿನ ಸಿಸಿಟಿವಿ ಕ್ಯಾಮೆರಾ ಒಡೆದಿದ್ದು, ಸಿಎಂ ಮನೆ ಸುತ್ತಲಿನ ಭದ್ರತಾ ತಡೆಗೋಡೆ ಮುರಿದಿರುವ ಹೋಗಿರುವ ಬಗ್ಗೆ ವರದಿಯಾಗಿದೆ.

ದೆಹಲಿ ವಿಧಾನಸಭೆಯಲ್ಲಿ ಮಾತನಾಡುವಾಗ ಕೇಜ್ರಿವಾಲ್​ ಅವರು ಬಿಜೆಪಿ ಪ್ರಚಾರ ಮಾಡುತ್ತಿರುವ ದಿ ಕಾಶ್ಮೀರ್​ ಫೈಲ್ಸ್​ ಚಿತ್ರದ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಕೇಜ್ರಿವಾಲ್​ ಮನೆಯ ಮೇಲೆ ಬಿಜೆಪಿ ಬೆಂಬಲಿಗರು ದಾಳಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಸಿಎಂ ಕೇಜ್ರಿವಾಲ್​ ಮನೆಯ ಮೇಲೆ ದಾಳಿ ಮಾಡಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಆಮ್​ ಆದ್ಮಿ ಪಕ್ಷದ ಉಪ ಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ, ಅರವಿಂದ್​ ಕೇಜ್ರಿವಾಲ್ ಕೊಲ್ಲಲು ಬಿಜೆಪಿ ಸಂಚು ರೂಪಿಸಿದೆ ಎಂದು ಆರೋಪ ಮಾಡಿದ್ದಾರೆ.

ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಸುಳ್ಳು ಎಂದು ಹೇಳಿದ ಕೇಜ್ರಿವಾಲ್ ಅವರ ಹೇಳಿಕೆ ಖಂಡಿಸಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೇತೃತ್ವದ ಕಾರ್ಯಕರ್ತರ ಗುಂಪೊಂದು ಕೇಜ್ರಿವಾಲ್ ಅವರ ನಿವಾಸದ ಮುಂದೆ ಬುಧವಾರ ಪ್ರತಿಭಟನೆ ನಡೆಸಿ, ಕೇಜ್ರಿವಾಲ್​ ಮನೆಯನ್ನು ಹಾನಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು