News Karnataka Kannada
Saturday, April 27 2024
ದೆಹಲಿ

ದೆಹಲಿ, ಹರ್ಯಾಣ, ಯುಪಿ ಬಳಿಕ ಇದೀಗ ತಮಿಳುನಾಡಿನಲ್ಲೂ ಮಾಸ್ಕ್ ಕಡ್ಡಾಯ

Mask
Photo Credit : IANS

ನವದೆಹಲಿ : ಕೋವಿಡ್ 19 ಸೋಂಕು ದೇಶದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ, ಹರ್ಯಾಣ, ಉತ್ತರಪ್ರದೇಶದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಘೋಷಿಸಿದ್ದ ಬೆನ್ನಲ್ಲೇ ಇದೀಗ ತಮಿಳುನಾಡು ಸರ್ಕಾರ ಶುಕ್ರವಾರ(ಏಪ್ರಿಲ್ 22) ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿದೆ.

ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಘೋಷಿಸಿರುವ ತಮಿಳುನಾಡು ಸರ್ಕಾರ, ಒಂದು ವೇಳೆ ನಿಯಮ ಉಲ್ಲಂಘಿಸಿದರೆ 500 ರೂಪಾಯಿ ದಂಡ ವಿಧಿಸಲಾಗುವುದು ಎಂದು ತಿಳಿಸಿದೆ.

ರಾಷ್ಟ್ರರಾಜಧಾನಿ ದೆಹಲಿ ಸೇರಿದಂತೆ ಹಲವೆಡೆ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ವಿವರಿಸಿದೆ.

ಕಳೆದ ಕೆಲವು ದಿನಗಳಿಂದ ತಮಿಳುನಾಡಿನಲ್ಲಿಯೂ ಕೋವಿಡ್ ಸೋಂಕು ಪ್ರಕರಣ ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾಗತೊಡಗಿದೆ. ಬುಧವಾರ ತಮಿಳುನಾಡಿನಲ್ಲಿ 31 ಪ್ರಕರಣ ಪತ್ತೆಯಾಗಿದ್ದು, ಗುರುವಾರ 39 ಮಂದಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿರುವುದಾಗಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು