Categories: ದೆಹಲಿ

ದೆಹಲಿ : 2022ರ ಜನವರಿ 1ರವರೆಗೂ ಪಟಾಕಿ ಮಾರಾಟ ಮಾಡುವುದು ಮತ್ತು ಸಿಡಿಸುವುದು ನಿಷೇಧ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2022ರ ಜನವರಿ 1ರವರೆಗೂ ಪಟಾಕಿ ಮಾರಾಟ ಮಾಡುವುದು ಮತ್ತು ಸಿಡಿಸುವುದನ್ನು ನಿಷೇಧಿಸಿ, ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಆದೇಶಿಸಿದೆ.

ಇನ್ನೇನು ಕೆಲವೇ ದಿನಗಳಲ್ಲಿ ನವರಾತ್ರಿ, ದೀಪಾವಳಿ ಸೇರಿದಂತೆ ಸಾಲು-ಸಾಲು ಹಬ್ಬಗಳು ಬರಲಿದ್ದು, ಹಬ್ಬಗಳ ಆಚರಣೆಯಲ್ಲಿ ಪಟಾಕಿ ಸಿಡಿಸುವುದು ವಾಯುಮಾಲಿನ್ಯಕ್ಕೆ ಕಾರಣವಾಗಲಿದೆ. ಹಾಗಾಗಿ ವಾಯುಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ದೆಹಲಿಯ ಮಾಲಿನ್ಯ ನಿಯಂತ್ರಣ ಸಮಿತಿ ತಿಳಿಸಿದೆ.

ಕೋವಿಡ್ ನ ಈ ಸಮಯದಲ್ಲಿ ಪಟಾಕಿ ಸಿಡಿಸುವುದರಿಂದ ವೃದ್ಧರು ಮತ್ತು ಚಿಕ್ಕಮಕ್ಕಳ ಶ್ವಾಸಕೋಶಕ್ಕೆ ಹಾನಿಯುಂಟು ಮಾಡುವ ಸಂಭಾವ್ಯತೆಯೂ ಹೆಚ್ಚಿದೆ ಮತ್ತು ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರಿದೆ. ಸ್ವಚ್ಛಗಾಳಿ ಉಸಿರಾಡಲು ಸಾಧ್ಯವಾಗದೆ ಶ್ವಾಸಕೋಶ ಸಂಬಂಧಿತ ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ಪಟಾಕಿಯ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.

Sneha Gowda

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

26 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

35 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

38 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

50 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

53 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

53 mins ago