ದೆಹಲಿ, ಏ. 15 : ರಾಷ್ಟ್ರದ ರಾಜಧಾನಿಯಲ್ಲಿ ಮಹಿಳೆಯರು ಎಷ್ಟು ಸೇಫ್ ಎನ್ನುವುದೇ ಪ್ರಶ್ನೆಯಾಗಿದ್ದು, ಮಹಿಳೆಯ ಮೇಲೆ ಗ್ಯಾಂಗ್ ರೇಪ್ ನಡೆಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. 36 ವರ್ಷದ ಮಹಿಳೆಯ ಮೇಲೆ ಮೂರು ಜನ ಕಾಮುಕರು ಸೇರಿಕೊಂಡು ಅತ್ಯಾಚಾರ ಎಸಗಿದ್ದರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಜನ ಆರೋಪಿಗಳನ್ನೂ ದೆಹಲಿ ಪೋಲಿಸರು ಬಂಧಿಸಿದ್ದಾರೆ.
ಮಹಿಳೆಯು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ದೆಹಲಿಯ ಪೋಲಿಸರಿಗೆ ದೂರು ನೀಡಿದ್ದಳು. ನವೀನ್ ಸಿಂಗ್ ಭಂಡಾರಿ (28), ಬಿಶ್ವಾ ಮೋಹನ್ (26) ಮತ್ತು ಅಕ್ಷಯ್ ತನೇಜಾ ಎಂಬುವ ಯುವಕರು ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸದೆ. ಘಟನೆ ನಡೆದ ಕೆಲವೇ ಕೆಲವು ಗಂಟೆಗಳಲ್ಲಿ ದೆಹಲಿ ಪೋಲಿಸರು ಆರೋಪಿಗಳನ್ನು ಬಂಧಿಸಿದ್ದಾರೆ.
ದೆಹಲಿಯ ಪಂಜಾಬಿ ಬಾಗ್ ಪೋಲಿಸ್ ಠಾಣೆಯ ಪೋಲಿಸರು ಸೆಕ್ಷನ್ 376 Dರ ಅಡಿ ಹಾಗೂ ಸೆಕ್ಷನ್ 328 ರ ಅಡಿ ಎಫ್ಐಆರ್ ದಾಖಲಿಸಿಕೊಂಡು ಶುಕ್ರವಾರ (15 ಏಪ್ರಿಲ್) ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು ಎಂದು ದೆಹಲಿಯ ಪಶ್ಚಿಮ ವಿಭಾಗದ ಉಪ ಪೋಲಿಸ್ ವರಿಷ್ಠಾಧಿಕಾರಿ ಜ್ಞಾನಶ್ಯಾಮ್ ಬನ್ಸಾಲ್ ತಿಳಿಸಿದ್ದಾರೆ.
ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…
ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.
ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…
ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್ನೊಂದಿಗೆ ಬಂದಿದೆ.
ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…
ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…