News Karnataka Kannada
Saturday, April 27 2024
ದೆಹಲಿ

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ

Ita Covid19 Mng 06082021
Photo Credit :

ನವದೆಹಲಿ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 12,428 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದು ಕಳೆದ 238 ದಿನಗಳ ನಂತರದ ಕನಿಷ್ಠ ಸಂಖ್ಯೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ(ಅಕ್ಟೋಬರ್ 26) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,63,816ಕ್ಕೆ ಇಳಿಕೆಯಾಗಿದ್ದು, ಇದು 241 ದಿನಗಳ ಕನಿಷ್ಠ ಸಂಖ್ಯೆಯಾಗಿದೆ. ಸತತ 31 ದಿನಗಳಿಂದ ದಿನಂಪ್ರತಿ 30,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ವರದಿಯಾಗುತ್ತಿದೆ ಎಂದು ವರದಿ ಹೇಳಿದೆ.

ಕಳೆದ 24ಗಂಟೆಗಳಲ್ಲಿ 356 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಅಲ್ಲದೇ 15,951 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ. ಕೇರಳದಲ್ಲಿ ಅತೀ ಹೆಚ್ಚು ಪ್ರಕರಣಗಳಿದ್ದು, ಕಳೆದ 24ಗಂಟೆಗಳಲ್ಲಿ 6,664 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 53 ಸಾವು ಸಂಭವಿಸಿದೆ.

ಸೋಮವಾರ 11ಲಕ್ಷಕ್ಕಿಂತಲೂ ಅಧಿಕ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೆ ಒಟ್ಟು ದೇಶದಲ್ಲಿ 60,19,01,543 ಮಂದಿಗೆ ಪರೀಕ್ಷೆ ನಡೆಸಲಾಗಿದೆ. ದಿನದ ಪಾಸಿಟಿವಿಟಿ ದರ ಶೇ.1.10ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.1.24ರಷ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು