ನವದೆಹಲಿ : ದೇಶದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಹೆಚ್ಚಳವಾಗಿದ್ದು, ನಿನ್ನೆ ಒಂದೇ ದಿನ 30 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.ಶನಿವಾರ ತೆಲಂಗಾಣದಲ್ಲಿ 12 ಒಮಿಕ್ರಾನ್ ಪ್ರಕರಣಗಳು ಪತ್ತೆಯಾದರೆ, ಕರ್ನಾಟಕದಲ್ಲಿ 6, ಕೇರಳದಲ್ಲಿ 4, ಮಹಾರಾಷ್ಟ್ರದಲ್ಲಿ 8 ಮಂದಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ.
ಈ ಮೂಲಕ ಭಾರತದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 143 ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಸದ್ಯ ಒಮಿಕ್ರಾನ್ ಸೋಂಕಿತರ ಸಂಖ್ಯೆ 143 ಕ್ಕೆ ಏರಿಕೆಯಾಗಿದ್ದು, ಮಹಾರಾಷ್ಟ್ರ (48), ದೆಹಲಿ (22), ರಾಜಸ್ಥಾನ (17) ಮತ್ತು ಕರ್ನಾಟಕ (14), ತೆಲಂಗಾಣ (20), ಗುಜರಾತ್ (7), ಕೇರಳ (11), ಆಂಧ್ರಪ್ರದೇಶ (1), ಚಂಡೀಗಢ (1), ತಮಿಳುನಾಡು (1) ಮತ್ತು ಪಶ್ಚಿಮ ಬಂಗಾಳ (1) ಗಳಲ್ಲಿ ಈವರೆಗೆ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಮೈಕ್ರಾನ್ ಪ್ರಕರಣಗಳು ವರದಿಯಾಗಿವೆ.