News Karnataka Kannada
Saturday, April 27 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,451 ಹೊಸ ಕೇಸ್ ಪತ್ತೆ

Covid 19
Photo Credit :

ನವದೆಹಲಿ: ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,451 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 54 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,52,425ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,22,116ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,241ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,589ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,16,068ಕ್ಕೆ ತಲುಪಿದೆ.

ಇದನ್ನೂ ಓದಿ: ಕೋವಿಡ್-19: ರಾಜ್ಯದಲ್ಲಿಂದು 61 ಹೊಸ ಪ್ರಕರಣ ಪತ್ತೆ, 49 ಚೇತರಿಕೆ, ಯಾವುದೇ ಸಾವು ವರದಿಯಾಗಿಲ್ಲ

ಇನ್ನು ಭಾರತದಲ್ಲಿ ಒಂದೇ 4,49,114 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 83,33,77,052 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,87,26,26,515 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು