News Karnataka Kannada
Monday, May 06 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,569 ಹೊಸ ಕೋವಿಡ್ ಪ್ರಕರಣಗಳು ದೃಢ

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 201 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 39 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
Photo Credit : IANS

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 1,569 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 19 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,31,25,370ಕ್ಕೆ ಏರಿಕೆಯಾಗಿದೆ. ಆ ಪೈಕಿ 5,24,260 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 4,25,84,710 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 16,400 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಪಾಸಿಟಿವಿಟಿ ದರ ಶೇ 0.44 ರಷ್ಟಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 3,228, ಕೇರಳದಲ್ಲಿ 3,402, ಕರ್ನಾಟಕದಲ್ಲಿ 1,840, ಮಹಾರಾಷ್ಟ್ರದಲ್ಲಿ 1,526, ಉತ್ತರಪ್ರದೇಶದಲ್ಲಿ 1,097 ಸಕ್ರಿಯ ಪ್ರಕರಣಗಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು