Categories: ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2.71 ಲಕ್ಷ ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ : ದೇಶದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸಿದ್ದು, ಕಳೆದ 24 ಗಂಟೆಯಲ್ಲಿ 2.71 ಲಕ್ಷ ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 314 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 486066 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1550377 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 138331 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 35085721 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 66,21,395 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,56,76,15,454 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 16,65,404 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಈವರೆಗೆ 7,743 ಒಮಿಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

8 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

8 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

9 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

9 hours ago