Categories: ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,568 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ : ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಭಾರಿ ಕುಸಿತಗೊಂಡಿದೆ. ಆದರೆ ನಿನ್ನೆಗಿಂತ ಇಂದು ಹೆಚ್ಚು ಸೋಂಕಿತರು ಪತ್ತೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 2,568 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 97 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 515974 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 33917 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 4722 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42446171 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 19,64,423 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,80,40,28,891 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 7,01,773 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

1 hour ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

1 hour ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

2 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

2 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

3 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

4 hours ago