News Karnataka Kannada
Monday, May 06 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,710 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

Corona
Photo Credit : IANS

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,710 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 14 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,539ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 15,814 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,296 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,26,07,177 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 14,41,072 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,92,97,74,973 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,65,840 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು