ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 50,407 ಜನರಲ್ಲಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆ ನಿನ್ನೆಗಿಂತ ಕೊಂಚ ಏರಿಕೆಯಾಗಿದ್ದು, 24 ಗಂಟೆಯಲ್ಲಿ 804 ಜನ ಬಲಿಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 507981 ಕ್ಕೆ ಏರಿಕೆಯಾಗಿದೆ.ಇನ್ನು ದೇಶದಲ್ಲಿ 610443 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 136962 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 41468120 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 46,82,662 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,72,29,47,688 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 14,50,532 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.