Categories: ದೆಹಲಿ

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆ: ಕಳೆದ 24 ಗಂಟೆಗಳಲ್ಲಿ 67,597 ಪ್ರಕರಣ ಪತ್ತೆ

ನವದೆಹಲಿ : ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 67,597 ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1,188 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,23,39,611ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,04,062ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 9,94,891ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,80,456 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,08,40,658ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 13,46,534ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 74,29,08,121 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,70,21,72,615 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Gayathri SG

Recent Posts

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

5 mins ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

19 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

21 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

33 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

39 mins ago

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

57 mins ago