ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,593 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 2,593 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 44 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 522193 ಕ್ಕೆ ಏರಿಕೆಯಾಗಿದೆ.