News Karnataka Kannada
Sunday, April 28 2024
ದೆಹಲಿ

ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ

Petrol Main Newsk 5721678124
Photo Credit :

ನವದೆಹಲಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 35 ಪೈಸೆಗಳಷ್ಟು ಮತ್ತು ಡೀಸೆಲ್ ದರ 35 ಪೈಸೆ ಏರಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಶನಿವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 108.76ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 99.59 ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 105.14ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 93.88 ರೂ ಗೆ ಏರಿಕೆಯಾಗಿದೆ.

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 111.05ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 101.74 ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 105.39ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 96.59 ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 102.36ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 98.23 ರೂ ಗೆ ಏರಿಕೆಯಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು