News Karnataka Kannada
Saturday, May 04 2024
ದೆಹಲಿ

ದೇಶದಲ್ಲಿ 24ಗಂಟೆಗಳಲ್ಲಿ 6,531 ಕೋವಿಡ್ ಪ್ರಕರಣ ಪತ್ತೆ

Covid 19
Photo Credit :

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 6,531 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 315 ಮಂದಿ ಸಾವನ್ನಪ್ಪಿದ್ದಾರೆ.ಕಳೆದ 24ಗಂಟೆಗಳ ಅವಧಿಯಲ್ಲಿ 925 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಇದರೊಂದಿಗೆ ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 75,841ಕ್ಕೆ ಇಳಿಕೆಯಾಗಿರುವುದಾಗಿ ವರದಿ ಹೇಳಿದೆ.

ಮತ್ತೊಂದೆಡೆ ದೇಶದಲ್ಲಿ ಕೋವಿಡ್ ನ ಹೊಸ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 578ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.ಜಗತ್ತಿನಾದ್ಯಂತ ಕ್ಷಿಪ್ರವಾಗಿ ಹರಡುತ್ತಿರುವ ಒಮಿಕ್ರಾನ್ ಭಾರತದಲ್ಲಿಯೂ ಪತ್ತೆಯಾಗತೊಡಗಿದೆ. ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 578ಕ್ಕೆ ಏರಿಕೆಯಾಗಿದೆ. ಅಲ್ಲದೇ ಕನಿಷ್ಠ 151 ಮಂದಿ ಗುಣಮುಖರಾಗಿದ್ದಾರೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.

ದೇಶದಲ್ಲಿ 24 ಗಂಟೆಗಳಲ್ಲಿ 7,141 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಅಲ್ಲದೇ ಈವರೆಗೆ ದೇಶಾದ್ಯಂತ ಕೋವಿಡ್ ಸೋಂಕಿನಿಂದ 4,79,997 ಮಂದಿ ಸಾವನ್ನಪ್ಪಿರುವುದಾಗಿ ಅಂಕಿಅಂಶದಲ್ಲಿ ವಿವರಿಸಿದೆ.

ಕೋವಿಡ್ 19 ಸೋಂಕಿನಿಂದ ಒಟ್ಟು 3,42,37,495 ಮಂದಿ ಗುಣಮುಖರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು