News Karnataka Kannada
Saturday, May 04 2024
ದೆಹಲಿ

ದೇಶದಲ್ಲಿ 400ರ ಗಡಿ ದಾಟಿದ ಓಮೈಕ್ರಾನ್‌ ಪ್ರಕರಣ

Omicron
Photo Credit :

ನವದೆಹಲಿ: ಭಾರತದಲ್ಲಿ ಒಟ್ಟು 415 ಓಮೈಕ್ರಾನ್‌ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 115 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಕೋವಿಡ್‌ ವರದಿಯಲ್ಲಿ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಅತಿಹೆಚ್ಚು 108 ಓಮೈಕ್ರಾನ್‌ ಪ್ರಕರಣಗಳು ದೃಢಪಟ್ಟಿವೆ. ನಂತರ ದೆಹಲಿಯಲ್ಲಿ 79, ಗುಜರಾತ್‌ನಲ್ಲಿ 43, ತೆಲಂಗಾಣದಲ್ಲಿ 38, ಕೇರಳದಲ್ಲಿ 37, ತಮಿಳುನಾಡಿನಲ್ಲಿ 34 ಮತ್ತು ಕರ್ನಾಟಕದಲ್ಲಿ 31 ಓಮೈಕ್ರಾನ್‌ ಕೇಸ್‌ಗಳು ವರದಿಯಾಗಿವೆ.

ಮತ್ತೊಂದೆಡೆ ಕೋವಿಡ್‌ ಸೋಂಕಿನ ಪ್ರಮಾಣವೂ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯ ಅವಧಿಯಲ್ಲಿ ದೇಶದಾದ್ಯಂತ ಒಟ್ಟು 7,189 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಕೋವಿಡ್‌ ಸೋಂಕಿತ ಸಂಖ್ಯೆ 3,47,79,815ಕ್ಕೆ ಏರಿಕೆಯಾಗಿದೆ. ಒಟ್ಟಾರೆ ದೇಶದಲ್ಲಿ 77,032 ಸಕ್ರಿಯ ಕೋವಿಡ್‌ ಪ್ರಕರಣಗಳು ಇವೆ.

ಕೋವಿಡ್‌ ಕಾರಣದಿಂದ 387 ಮಂದಿ ಮೃತರಾಗಿದ್ದಾರೆ. ಇದುವರೆಗೆ ದೇಶದಲ್ಲಿ 4,79,520 ಮಂದಿ ಕೊರೊನಾ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ದೈನಂದಿನ ಪ್ರಕರಣಗಳ ಸಂಖ್ಯೆಯನ್ನು ಹೋಲಿಸಿದರೆ 58 ದಿನಗಳಿಂದ 15,000ಕ್ಕಿಂತ ಕಡಿಮೆ ಪಾಸಿಟಿವ್‌ ಪ್ರಕರಣಗಳು ವರದಿಯಾಗುತ್ತಿವೆ. ಇದುವರೆಗೆ 3,42,23,263 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಮರಣ ಪ್ರಮಾಣವು ಶೇಕಡಾ 1.38 ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು