Categories: ದೆಹಲಿ

ದೇಶದಾದ್ಯಂತ 10,302 ಹೊಸ ಕೋವಿಡ್‌ ಪ್ರಕರಣ ದೃಢ, 267 ಸಾವು

ನವದೆಹಲಿ: ದೇಶದಾದ್ಯಂತ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 10,302 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ.ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,44,99,925ಕ್ಕೆ ಏರಿಕೆಯಾಗಿದ್ದರೆ, ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 4,65,349ಕ್ಕೆ ಏರಿದೆ.

ಈ ಅವಧಿಯಲ್ಲಿ 267 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಪ್ರಸ್ತುತ 1,24,868 ಪ್ರಕರಣಗಳು ಸಕ್ರಿಯವಾಗಿವೆ. ದೇಶದಲ್ಲಿ ಇದುವರೆಗೂ 115.79 ಕೋಟಿಗೂ ಅಧಿಕ ಡೋಸ್‌ ಕೋವಿಡ್‌ ಲಸಿಕೆ ನೀಡಲಾಗಿದೆ ಎಂದು ಪ್ರಕಟಣೆ ಹೇಳಿದೆ.

Swathi MG

Recent Posts

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

18 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

28 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

60 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

1 hour ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

2 hours ago