ದೆಹಲಿ: ರಾಮನವಮಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡುವ ಮೂಲಕ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ‘ದೇಶದ ಜನತೆಗೆ ರಾಮನವಮಿಯ ಶುಭಾಶಯಗಳು.
ಭಗವಾನ್ ಶ್ರೀರಾಮನ ಕೃಪೆಯಿಂದ ಪ್ರತಿಯೊಬ್ಬರೂ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ಪಡೆಯಲಿ. ಜೈ ಶ್ರೀ ರಾಮ್!’ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ 1 ಗಂಟೆಗೆ ಗುಜರಾತ್ನ ಜುನಾಗಢ್ನ ಗಥಿಲಾದಲ್ಲಿರುವ ಉಮಿಯಾ ಮಾತಾ ದೇವಾಲಯದ 14 ನೇ ಸಂಸ್ಥಾಪನಾ ದಿನಾಚರಣೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು 2008 ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ದೇವಾಲಯವನ್ನು ಉದ್ಘಾಟಿಸಿದ್ದರು.
देशवासियों को रामनवमी की ढेरों शुभकामनाएं। भगवान श्रीराम की कृपा से हर किसी को जीवन में सुख, शांति और समृद्धि प्राप्त हो। जय श्रीराम!
— Narendra Modi (@narendramodi) April 10, 2022