Categories: ದೆಹಲಿ

ದೇಶದ 15ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ದೇಶದ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3ರಿಂದ ಕೋವಿಡ್ ತಡೆ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಘೋಷಿಸಿದರು.ಕೊರೊನಾ ರೂಪಾಂತರ ತಳಿ ಓಮೈಕ್ರಾನ್ ಬಗ್ಗೆ ಆತಂಕ ಬೇಡ, ನಿಯಮಾವಳಿಗಳನ್ನು ಪಾಲಿಸಿ ಎಂದು ಅವರು ಜನರಿಗೆ ಕರೆ ನೀಡಿದರು.

ಶಾಲಾ ಕಾಲೇಜಿಗೆ ತೆರಳಿ, 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಲಾಗುವುದು ಎಂದು ಅವರು ತಿಳಿಸಿದರು. ಶನಿವಾರ ರಾತ್ರಿ ಅವರು ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ಗಂಭೀರ ಆರೋಗ್ಯ ಸಮಸ್ಯೆ ಇರುವ 60 ವರ್ಷ ಮೇಲ್ಪಟ್ಟ ವರಿಗೆ ಮುಂಜಾಗ್ರತಾ ಕ್ರಮವಾಗಿ ಈ ಬೂಸ್ಟರ್ ಡೋಸ್‌ ಲಸಿಕೆ ನೀಡಲಾಗುತ್ತದೆ ಎಂದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ಮತ್ತು ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ ಮೋದಿ ಅವರು ಈ ಮಹತ್ವದ ಘೋಷಣೆ ಮಾಡಿದ್ದಾರೆ.

ರಾಜ್ಯಗಳಿಗೆ ಕೇಂದ್ರ ತಂಡ: ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ, ಕರ್ನಾಟಕ ಸೇರಿದಂತೆ 10 ರಾಜ್ಯಗಳಿಗೆ ಕೇಂದ್ರದ ತಾಂತ್ರಿಕ ತಂಡಗಳನ್ನು ನಿಯೋಜಿಸಲಾಗಿದೆ. ಪ್ರತಿ ತಂಡದಲ್ಲಿ ವೈದ್ಯರು ಅಥವಾ ಐಸಿ ಎಂಆರ್ ವಿಜ್ಞಾನಿಗಳನ್ನು ಒಳಗೊಂಡ ನಾಲ್ವರು ಸದಸ್ಯರು ಇರಲಿದ್ದಾರೆ. ಸೋಂಕಿತರ ಪ್ರಮಾಣ ಏರಿಕೆ ಕಾಣುತ್ತಿರುವ ರಾಜ್ಯಗಳು ಅಥವಾ ಲಸಿಕೆ ಅಭಿಯಾನದಲ್ಲಿ ಹಿಂದೆ ಉಳಿದಿ ರುವ ರಾಜ್ಯಗಳನ್ನು ಗುರುತಿಸಿ, ವಿಭಿನ್ನ ಅಧ್ಯಯನ ವಿಷಯಗಳನ್ನು ನಿರ್ವ ಹಿಸುವ ಕೇಂದ್ರದ ತಂಡಗಳನ್ನು ಅಲ್ಲಿಗೆ ಕಳುಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ನಿರ್ಧರಿಸಿದೆ.

Swathi MG

Recent Posts

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

25 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

41 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

59 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

1 hour ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

2 hours ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

2 hours ago