ದೆಹಲಿ

ದ.ಕ. ಜಿಲ್ಲೆಯ ವಿವಿಧ ಹೆದ್ದಾರಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ಗಡ್ಕರಿ ಸೂಚನೆ

ನವದೆಹಲಿ: ದಕ್ಷಿಣಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಅವರು ಇಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಜ.10 ರಂದು ಮಂಗಳೂರಿಗೆ ಆಗಮಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 2555.88ರೂ ಕೋಟಿ ವೆಚ್ಚದ ವಿವಿಧ ಹೆದ್ದಾರಿ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ಕಾಮಗಾರಿಗಳ ಪುನರ್ ಚಾಲನೆ ನೀಡಲಿರುವ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು.

ಇದೇ ವೇಳೆ ಮಂಗಳೂರು ಬೆಂಗಳೂರು ನಡುವಿನ ಶಿರಾಡಿ ಘಾಟ್ ಸುರಂಗ ಮಾರ್ಗದ ಯೋಜನೆಯನ್ನು ಆದಷ್ಟು ಶೀಘ್ರದಲ್ಲಿ ಕೈಗೆತ್ತಿಕೊಳ್ಳುವಂತೆ ವಿನಂತಿಸಲಾಯಿತು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಸಚಿವರು ಜಿಲ್ಲೆಗೆ ಅನುಕೂಲವಾಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಸಂಬಂಧಪಟ್ಟ ಇಲಾಖೆಗೆ ಸೂಚಿಸುವುದಾಗಿ ತಿಳಿಸಿದ್ದಾರೆ ಎಂದು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದರು.

Sneha Gowda

Recent Posts

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

27 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

43 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

1 hour ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

1 hour ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

2 hours ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

2 hours ago