ನಮ್ಮೆಲ್ಲರ ಹೆಮ್ಮೆಯ ಪ್ರಧಾನಿ “ನರೇಂದ್ರ ಮೋದಿ’ಯವರು ರಾಜಕೀಯ ಮುಖ್ಯವಾಹಿನಿಗೆ ಬಂದು ಇಂದಿಗೆ ಭರ್ತಿ 20 ವರ್ಷ. ನರೇಂದ್ರ ಮೋದಿಯವರು 2001ರ ಅಕ್ಟೋಬರ್ 7ರಂದು ಗುಜರಾತ್ನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. 2001ರಿಂದ 2014ರವರೆಗೆ ಗುಜರಾತ್ನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು.
2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಿ ಮೋದಿ ಆಯ್ಕೆಯಾದರು. ಅವರ ವರ್ಚಸ್ಸಿನಿಂದಾಗಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಕೇಂದ್ರದಲ್ಲಿ ಮೊದಲ ಬಾರಿಗೆ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂತು. ಇದೀಗ ಮೋದಿ ಎರಡನೇ ಅವಧಿ ಮುಂದುವರಿಯುತ್ತಿದ್ದಾರೆ.
ಈ ವಿಶೇಷ ದಿನದೆ ಹಿನ್ನೆಲೆ ಇಂದು ಬಿಜೆಪಿ ದೇಶಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಇಂದು ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಸ್ವಚ್ಛತಾ ಕಾರ್ಯ ನಡೆಸಲಿದ್ದಾರೆ. ಹಾಗೆಯೇ ಮೋದಿ ಜಾರಿಗೆ ತಂದ ಸಾರ್ವಜನಿಕ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು, ನದಿ ಶುದ್ಧೀಕರಣ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.