ನವದೆಹಲಿ, ;ದೇಶದಲ್ಲೇ ದಿನದಿಂದ ದಿನಕ್ಕೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಿಕೆ ಅಭಿಯಾನ ಹೆಚ್ಚು ಮಾಡುತ್ತಿರುವ ಕೇಂದ್ರ ಸರ್ಕಾರ ನವೆಂಬರ್ ತಿಂಗಳಿನಿಂದ ಮಕ್ಕಳಿಗೆ ದೇಸೀಯ ಲಸಿಕೆ ನೀಡಲು ಮುಂದಾಗಿದೆ.
2 ರಿಂದ 18 ವರ್ಷ ವಯೋಮಾನದ ಮಕ್ಕಳಿಗೆ ದೇಶೀಯವಾಗಿ ಅಭಿವೃದ್ಧಿಪಡಿಸಿದ ಲಸಿಕೆ “ಕೊವಾಕ್ಸಿನ್” ನೀಡಲು ಮುಂದಾಗಿರುವುದಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ವೈರಾಣು ಸಂಸ್ಥೆ, ನಿರ್ದೇಶಕಿ ಪ್ರಿಯಾ ಅಬ್ರಾಂ ತಿಳಿಸಿದ್ದಾರೆ.ಮಕ್ಕಳಿಗೆ ಲಸಿಕೆ ನೀಡುವ ಪ್ರಯೋಗ ಅಂತಿಮ ಹಂತದಲ್ಲಿದ್ದು ನವೆಂಬರ್ ವೇಳೆಗೆ ಎರಡರಿಂದ 18 ವರ್ಷ ವಯೋಮಾನದ ಮಕ್ಕಳಿಗೆ ಲಸಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.ಲಸಿಕೆಯ ಅಂತಿಮಹಂತದ ಪ್ರಯೋಗ ಸದ್ಯದಲ್ಲಿ ಕೇಂದ್ರ ಸರ್ಕಾರದ ಕೈ ಸೇರಲಿದ್ದು ನವೆಂಬರ್ ತಿಂಗಳಿನಿಂದ ಎಂದುಕೊಂಡರೆ ಮಕ್ಕಳಿಗೆ ಲಸಿಕೆ ನೀಡಿಕೆ ಪ್ರಕ್ರಿಯೆ ಆರಂಭವಾಗಿದೆ ಎಂದು ಅವರು ಹೇಳಿದ್ದಾರೆ.ಡಿಸೆಂಬರ್ ಅಂತ್ಯದ ವೇಳೆಗೆ 18 ವರ್ಷ ದಾಟಿದ ಎಲ್ಲಾ ಅರ್ಹ ನಾಗರಿಕರಿಗೆ ಲಸಿಕೆ ನೀಡಿಕೆ ಕಾರ್ಯಕ್ರಮ ಸಾಗಿದೆ ಈ ನಡುವೆ ನವಂಬರ್ ತಿಂಗಳು 2 ರಿಂದ 18 ವರ್ಷ ವಯೋಮಾನದ ಮಕ್ಕಳಿಗೆ ಲಸಿಕೆ ಹಾಕುವ ಕೆಲಸ ಆರಂಭವಾಗಲಿದೆ ಎಂದು ಹೇಳಿದ್ದಾರೆ
ನವಂಬರ್ ನಿಂದ ಮಕ್ಕಳಿಗೆ ಕೋವಾಕ್ಸಿನ್ ಲಸಿಕೆ: ಐಸಿಎಂಆರ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.