ನವದೆಹಲಿ : ಇಂದು ಬೆಳ್ಳಂಬೆಳಗ್ಗೆ ಹರಿಯಾಣದ ಅಂಬಾಲಾ-ದೆಹಲಿ ಹೆದ್ದಾರಿಯಲ್ಲಿ ಎರಡು ಬಸ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹರಿಯಾಣದ ಅಂಬಾಲಾ-ದೆಹಲಿ ಹೆದ್ದಾರಿಯಲ್ಲಿ ಎರಡು ಬಸ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ ದೆಹಲಿಯ ಕಡೆಗೆ ಹೋಗುತ್ತಿದ್ದಾಗ ಮತ್ತೊಂದು ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.