ದೆಹಲಿ

ನಾಗರಿಕರ ಹತ್ಯೆ : ನಾಗಾಲ್ಯಾಂಡ್ ಪರಿಸ್ಥಿತಿ ಉದ್ವಿಗ್ನ, ಭದ್ರತಾ ಪಡೆ ವಾಹನಗಳಿಗೆ ಬೆಂಕಿ

ನವದೆಹಲಿ: ಶನಿವಾರ ಸಂಜೆ ಈಶಾನ್ಯ ರಾಜ್ಯ ನಾಗಾಲ್ಯಾಂಡ್‌ನ ಸೋನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ನಂತರ ಆ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ಮುಂದುವರೆಸಲಾಗಿದೆ.

ಮೋನ್ ಜಿಲ್ಲೆಯ ಓಟಿಂಗ್ ಗ್ರಾಮದಲ್ಲಿ ಕೆಲವು ಯುವಕರ ಮೇಲೆ ಉಗ್ರಗಾಮಿಗಳೆಂದು ಭಾವಿಸಿದ ಭದ್ರತಾ ಪಡೆಗಳು ಗುಂಡು ಹಾರಿಸಿದ್ದಾರೆ. ನಂತರ ನಾಗಾಲ್ಯಾಂಡ್‌ ನಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಿಟ್ಟಿಗೆದ್ದ ಗ್ರಾಮಸ್ಥರು ಭದ್ರತಾ ಪಡೆಗಳ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.

ಭದ್ರತಾ ಪಡೆಗಳು ಇಲ್ಲಿ ಉಗ್ರಗಾಮಿಗಳು ಎಂಬ ಶಂಕೆಯ ಮೇಲೆ ಗುಂಡು ಹಾರಿಸಿ 11 ನಾಗರಿಕರನ್ನು ಕೊಂದಿದ್ದಾರೆ ಎಂದು ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು ದೃಢಪಡಿಸಿದ್ದು, ಘಟನೆಯನ್ನು ಖಂಡಿಸಿದ್ದಾರೆ. ಈ ಪ್ರದೇಶದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ ಅವರು, ಎಸ್‌ಐಟಿಯಿಂದ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಗಾಲ್ಯಾಂಡ್‌ನ ಓಟಿಂಗ್‌ನಲ್ಲಿ ನಡೆದ ಅಹಿತಕರ ಘಟನೆಯಿಂದ ದುಃಖವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದ ಅವರು, ರಾಜ್ಯ ಸರ್ಕಾರವು ರಚಿಸಿರುವ ಉನ್ನತ ಮಟ್ಟದ ಎಸ್‌ಐಟಿಯು ಸಮಗ್ರವಾಗಿ ನಡೆಸುತ್ತದೆ. ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದು ಹೇಳಿದ್ದಾರೆ.

Swathi MG

Recent Posts

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

15 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

31 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

59 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

1 hour ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

1 hour ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

1 hour ago