ನವದೆಹಲಿ: ಸಾಮಾನ್ಯ ಅಂತಾರಾಷ್ಟ್ರೀಯ ಪ್ರಯಾಣ ಕಾರ್ಯಾಚರಣೆಯನ್ನ ಪುನರಾರಂಭಿಸಲು ಸರ್ಕಾರ ಉತ್ಸುಕವಾಗಿದ್ದು, ನಿಯಮಿತ ಅಂತರರಾಷ್ಟ್ರೀಯ ವಿಮಾನ ಸೇವೆ ವರ್ಷಾಂತ್ಯಕ್ಕೆ ಪುನರಾರಂಭಗೊಳ್ಳಲಿವೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.
ಇನ್ನು ಈ ಕುರಿತು ಪ್ರತಿಕ್ರಿಯಿಸಿದ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಬನ್ಸಾಲ್, ‘ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆ ಶೀಘ್ರದಲ್ಲೇ ಸಾಮಾನ್ಯ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ’ ಎಂದಿದ್ದಾರೆ.
ಇನ್ನು ಈ ಹಿಂದೆ ಸಿಂಧಿಯಾ, ‘ನಾವು ಪ್ರಕ್ರಿಯೆಯನ್ನು ಮೌಲ್ಯಮಾಪನ ಮಾಡುತ್ತಿದ್ದೇವೆ. ನಾವು ಸಾಮಾನ್ಯ ಸ್ಥಿತಿಗೆ ಮರಳುತ್ತಿದ್ದೇವೆ. ಮೊದಲು ನಾವು ನಮ್ಮ ದೇಶೀಯ ವಿಮಾನಗಳಲ್ಲಿ 100% ಪ್ರಯಾಣಿಕರ ಸಾಮರ್ಥ್ಯವನ್ನು ಅನುಮತಿಸಿದ್ದೇವೆ ಮತ್ತು ಈಗ ನಾವು ಆ ವಿಮಾನಗಳಲ್ಲಿ ವಿಮಾನದಲ್ಲಿ ಊಟವನ್ನ ಅನುಮತಿಸಿದ್ದೇವೆ’ ಎಂದು ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ಜಾಗತಿಕ ಆರ್ಥಿಕತೆ ನೀತಿ ಶೃಂಗಸಭೆಯಲ್ಲಿ ಹೇಳಿದ್ದರು.